LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಶೀಘ್ರದಲ್ಲೇ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಲಾಗುವುದು: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಭಿಕ್ಕಿಟ್ಟಿನ ಹಿನ್ನೆಲೆಯಲ್ಲಿ ಜೀನ್ಸ್ ಉದ್ಯಮವನ್ನು ಹೆಚ್ಚಿಸಲು ಅವಕಾಶ ಸಿಕ್ಕಿದ್ದು, ಬಳ್ಳಾರಿ ಸಮೀಪದ ಸಂಜೀವರಾಯನಕೋಟೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವತಿಯಿಂದ ಜೀನ್ಸ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಗುರುವಾರ ಘೋಷಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಭರವಸೆಯನ್ನು ಈಡೇರಿಸಲು ಈ ಯೋಜನೆಗಾಗಿ ಈಗಾಗಲೇ 154 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

'ಉದ್ದೇಶಿತ ಪಾರ್ಕ್‌ನಲ್ಲಿ ಜಾಗತಿಕವಾಗಿ ಹೆಸರಾಂತ ಕಂಪನಿಗಳು ತಮ್ಮ ಕಾರ್ಯಾಚರಣೆಗಳನ್ನು ಆರಂಭಿಸುವ ನಿರೀಕ್ಷೆಯಿದೆ. ಬಾಂಗ್ಲಾದೇಶದಲ್ಲಿನ ಅಸ್ಥಿರ ಪರಿಸ್ಥಿತಿಯು ಹೂಡಿಕೆದಾರರು ಮತ್ತು ರಫ್ತುದಾರರನ್ನು ಪರ್ಯಾಯ ಅವಕಾಶಗಳತ್ತ ಗಮನ ಹರಿಸಲು ಪ್ರೇರೇಪಿಸಿದೆ. ಹೀಗಾಗಿ, ಬಳ್ಳಾರಿ ಅನುಕೂಲಕರ ತಾಣವಾಗಿ ಹೊರಹೊಮ್ಮಿದೆ. ಜೀನ್ಸ್ ವಲಯದಲ್ಲಿ ಗಮನಾರ್ಹ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ನಾವು ಇದನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ' ಎಂದು ತಮ್ಮ ಕಚೇರಿಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ 500ಕ್ಕೂ ಹೆಚ್ಚು ಜೀನ್ಸ್ ತಯಾರಿಕಾ ಘಟಕಗಳಿದ್ದು, ಇದು ಹತ್ತಾರು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ. ಕೈಗಾರಿಕಾ ಇಲಾಖೆಯು ಜವಳಿ ಇಲಾಖೆಯ ನೆರವಿನೊಂದಿಗೆ ಈ ಪ್ರದೇಶವನ್ನು ಸಂಘಟಿತ ರಫ್ತು ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಯೋಜಿಸಿದೆ. ಜೀನ್ಸ್ ಉತ್ಪಾದನಾ ಘಟಕಗಳಿಗೆ ಸಂಭವನೀಯ ಪ್ರೋತ್ಸಾಹ ಆಯ್ಕೆಗಳ ಕುರಿತು ಚರ್ಚಿಸಲು ಜವಳಿ ಸಚಿವರೊಂದಿಗೆ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದರು.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಬಳ್ಳಾರಿಯ ಜೀನ್ಸ್ ಉದ್ಯಮದ ಕಾರ್ಮಿಕರು ಮತ್ತು ಮಾಲೀಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು ಮತ್ತು ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ 2023ರ ಆಗಸ್ಟ್ 1 ರಂದು ಕೈಗಾರಿಕಾ ಇಲಾಖೆಗೆ ಪತ್ರ ಬರೆದಿದ್ದರು.

ಎಂಬಿ ಪಾಟೀಲ್ ಅವರ ಪ್ರಕಾರ, ಸದ್ಯದ ಭೌಗೋಳಿಕ ರಾಜಕೀಯ ಪರಿಸ್ಥಿತಿಯು ಈ ದೃಷ್ಟಿಯನ್ನು ಸಾಕಾರಗೊಳಿಸಲು ಅನುಕೂಲಕರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಫೆಬ್ರುವರಿಯಲ್ಲಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಈ ಉಪಕ್ರಮವನ್ನು ಘೋಷಿಸಿದರು. ಬಳ್ಳಾರಿಯ ಜೀನ್ಸ್ ಉದ್ಯಮವನ್ನು ರಚನಾತ್ಮಕ ಚೌಕಟ್ಟಿನಲ್ಲಿ ಜಾಗತಿಕ ಗುಣಮಟ್ಟಕ್ಕೆ ಏರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು