LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶ್ರಮಿಸುವವರಿಗೆ ಪಕ್ಷದ ಜವಾಬ್ದಾರಿ ಸ್ಥಳೀಯ ಪದಾಧಿಕಾರಿಗಳ ನೇಮಕಾತಿ ಬಗ್ಗೆ ಡಿ.ಕೆ.ಶಿವಕುಮಾರ್ ಮಾತು

ಬೆಂಗಳೂರು: "ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ" ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಇಂದು ದೆಹಲಿಗೆ ತೆರಳುವ ಮುನ್ನ ಸದಾ ಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲವು ಮಂತ್ರಿಗಳ ಆಪ್ತರನ್ನು ಕೈಬಿಡಲಾಗಿದೆ ಎಂಬ ಚರ್ಚೆ ಇದೆ ಎಂದು ಕೇಳಿದಾಗ, "ಯಾವ ಚರ್ಚೆ? ನಿಮ್ಮ ಬಳಿ ಮಾತಾಡಿರಬಹುದು. ನನ್ನ ಬಳಿ ಯಾರೂ ಮಾತನಾಡಿಲ್ಲ. ನಮಗೆ ಕೆಲಸ ಮಾಡುವವರು ಬೇಕು. ಅವರಿಗೆ ಜವಾಬ್ದಾರಿ ಕೊಟ್ಟರೆ ತಕ್ಕ ಫಲಿತಾಂಶ ಬರಬೇಕು. ನಮ್ಮ ಸುತ್ತ ಗಿರಿಗಿಟ್ಲೆಯಂತೆ ಸುತ್ತುತ್ತಿದ್ದರೆ ಆಗುವುದಿಲ್ಲ. ತಾಲೂಕಿನಲ್ಲಿ ಕೂತು, ಅಲ್ಲಿರುವ ಸಮಸ್ಯೆ ಬಗೆಹರಿಸಬೇಕು. ಫಲಿತಾಂಶ ಬರುವ ನಾಯಕತ್ವಕ್ಕೆ ಮಾತ್ರ ಆದ್ಯತೆ ನೀಡಲಾಗುವುದು" ಎಂದು ತಿಳಿಸಿದರು.

ಪದಾಧಿಕಾರಿಗಳ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ನೀಡುತ್ತೀರಾ ಎಂದು ಕೇಳಿದಾಗ, "ಸಧ್ಯಕ್ಕೆ ಇಲ್ಲ. ಪಟ್ಟಿ ಸಿದ್ಧವಾಗಿದ್ದು, ಯಾರಿಗೆ ಆಸಕ್ತಿ ಇಲ್ಲ ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುವುದು. ಪಕ್ಷ ಸಂಘಟನೆ ವಿಚಾರದಲ್ಲಿ ನಮಗೆ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರು ಬೇಕು. ಬೇರೆಯವರ ಒತ್ತಡದ ಮೇರೆಗೆ ನೇಮಕ ಮಾಡಿಕೊಂಡು ಸಮಯ ವ್ಯರ್ಥ ಮಾಡುವುದರಲ್ಲಿ ಪ್ರಯೋಜನವಿಲ್ಲ. ಕೆಲಸ ಮಾಡುವವರಿಗೆ ಅವಕಾಶ ನೀಡಿ ಎಂದು ಎಐಸಿಸಿ ಆದೇಶ ನೀಡಿದೆ. ಈ ವಿಚಾರವಾಗಿ ನಾವು ವರದಿ ತರಿಸಿಕೊಂಡಿದ್ದು, ಸರಿಯಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು. ಮೀಸಲಾತಿ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿ ಅವರನ್ನು ತಯಾರಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಮಂತ್ರಿಗಳ ಅಭಿಪ್ರಾಯ ಪಡೆಯುತ್ತಿದ್ದು, ಈ ವಾರವೇ ಈ ಪಟ್ಟಿ ಅಂತಿಮಗೊಳಿಸಲಾಗುವುದು" ಎಂದು ಹೇಳಿದ್ದಾರೆ.
ದೆಹಲಿ ಭೇಟಿ ಬಗ್ಗೆ ಕೇಳಿದಾಗ, "ರಾಜಸ್ಥಾನದಲ್ಲಿ ನಡೆದ ಜಲಶಕ್ತಿ ಸಮ್ಮೇಳನದಲ್ಲಿ ನಾನು ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾಪ ಮಾಡಿದ್ದೆ.

ನೀರಾವರಿ ವಿಚಾರದಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಿಳಿಸಿದ್ದೆ. ಕೆಲವು ಯೋಜನೆಗೆ ಘೋಷಣೆ ಮಾಡಿದ ಹಣ ಬಿಡುಗಡೆ ಮಾಡಿಲ್ಲ, ಮತ್ತೆ ಕೆಲವು ಯೋಜನೆಗಳಿಗೆ ಅನುಮತಿ ನೀಡಿಲ್ಲ. ಈ ವಿಚಾರಗಳನ್ನು ಪ್ರಸ್ತಾಪಿಸಿದಾಗ ಸಚಿವರು ರಾಜ್ಯದ ನೀರಾವರಿ ವಿಚಾರವಾಗಿ ಪ್ರತ್ಯೇಕ ಸಭೆ ಮಾಡುವುದಾಗಿ ಭರವಸೆ ನೀಡಿ ಸಮಯ ನಿಗದಿ ಮಾಡಿದ್ದರು.ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರು ಸಭೆ ನಿಗದಿ ಮಾಡಿದ್ದರು. ಒಂದು ದಿನ ಮುಂಚಿತವಾಗಿ ನಮ್ಮ ಇಲಾಖೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿ ಪೂರ್ವಭಾವಿ ಸಭೆ ಮಾಡಲಾಗಿದೆ.

ಈ ಸಭೆಯಲ್ಲಿ ನಮ್ಮ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ" ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮರಾಠಿಗರ ದಾಳಿ ವಿಚಾರವಾಗಿ ಕೇಳಿದಾಗ, "ಗೃಹ ಸಚಿವರು, ಸಾರಿಗೆ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರವನ್ನು ನಿಭಾಯಿಸುತ್ತಿದ್ದಾರೆ. ಅವರು ಎಲ್ಲವನ್ನು ನೋಡಿಕೊಳ್ಳುತ್ತಾರೆ" ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು