LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀರಕ್ಷಾ ಕ್ರೀಡಾ ಮತ್ತು ಸಾಂಸ್ಕೃತಿಕ ಟ್ರಸ್ಟ್‍ನಿಂದ ಸಾಂಸ್ಕೃತಿಕ ಸಂಭ್ರಮ

ಬೆಂಗಳೂರು: ಸಿನಿಮಾರಂಗದ ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ ಅವರ ನೇತೃತ್ವದ ಶ್ರೀ ರಕ್ಷಾ ಕ್ರೀಡಾ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ 2024ರ ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನ ನಂದಿನಿ ಲೇಔಟ್ ಸರ್ಕ್ಯುಲರ್ ಉದ್ಯಾನವನದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ,ಪ್ರತಿಭಾನ್ವಿತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಕವಿ,ಚಲನಚಿತ್ರ ಸಾಹಿತ್ಯ ರಚನೆಕಾರ ಡಾ.ನಾಗೇಂದ್ರ ಪ್ರಸಾದ್, ಯಾವುದೇ ಪೋಷಕರು ಮಕ್ಕಳನ್ನು ನಿರಂತರ ಒದು,ಬರಹದಲ್ಲಿ ತಲೀನರಾಗಿಸಿದರೆ ಕೇವಲ ಸಂಬಳ ಗಳಿಕೆಯ ನೌಕರನಾಗಬಹುದು,ಆದರೆ ಮಕ್ಕಳು ಒದುವಿನ ಜೊತೆಗೆ ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಬಾಗಿಯಾದರೆ ಸಮಾಜದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳಯಬಹುದು, ಜಾಗ್ವಾರ್ ಸಣ್ಣಪ್ಪ ಐದನೂರು ಚಲನಚಿತ್ರದಲ್ಲಿ ನಟನೆ, ನೂರಕ್ಕೂ ಅಧಿಕ ಚಲನ ಚಿತ್ರಗಳಿಗೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಜತೆಗೆ ನಂದಿನಿ ಲೇಔಟ್ ಭಾಗದ ಮಕ್ಕಳಿಗೆ ಉಚಿತವಾಗಿ ತಮ್ಮ ಟ್ರಸ್ಟ್ ಮೂಲಕ ಟೆಕ್ವಾಂಡೋ ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಇವರಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಜಾಗ ನೀಡುವುದು ಸೂಕ್ತ ಎಂದು ಮನವಿ ಮಾಡಿದರು.ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಮಾತನಾಡಿ, ಜಾಗ್ವಾರ್ ಸಣ್ಣಪ್ಪ ಉಚಿತವಾಗಿ ಈ ಭಾಗದ ವಿದ್ಯಾರ್ಥಿಗಳಿಗೆ ಟೆಕ್ವಾಂಡೋ,ಜಿಮ್ನಾಸ್ಟಿಕ್, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ,ಸರ್ಕಾರದಿಂದ ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಮಕ್ಕಳು ಕಂಸಾಳೆ, ಡೊಳ್ಳು ಕುಣಿತ, ಯಕ್ಷಗಾನ, ಸಿಂಗರ್ ನಾಟಕ, ಕೊಡವ ನೃತ್ಯ, ಯೋಗ ಪ್ರದರ್ಶನ, ಟೆಕ್ವಾಂಡೋ, ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಪ್ರದರ್ಶಿಸಿ ಎಲ್ಲರ ಗಮನ ಸಳೆದರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ ಪಾಲಿಕೆ ಸದಸ್ಯ ರಾಜೇಂದ್ರ ಕುಮಾರ್, ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಮಂಡಲ ಅಧ್ಯಕ್ಷ ಹೆಚ್.ಎಸ್. ರಾಘವೇಂದ್ರ ಶೆಟ್ಟಿ, ಬ್ರಾಹ್ಮಣ ಮಹಾಸಭಾದ ವೆಂಕಟ ಶಾಸ್ತ್ರಿ,ನಂದಿನಿ ಲೇಔಟ್ ಬಿಜೆಪಿ ಮಂಡಲ ಅಧ್ಯಕ್ಷ ಲೋಕೇಶ್,ಚಲನ ಚಿತ್ರ ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ, ಟ್ರಸ್ಟ್ ಅಧ್ಯಕ್ಷೆ ಲಕ್ಷ್ಮೀ ಸಣ್ಣಪ್ಪ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು