LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Tumakuru

ಶ್ರೀ ಸಿದ್ದಗಂಗಾಮಠದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ ಮದ್ಯ, ಮಾದಕ ವಸ್ತುಗಳ ಬಗ್ಗೆ ಜಾಗೃತಿ  

ತುಮಕೂರು: ಮದ್ಯ ಮತ್ತು ಮಾದಕ ವಸ್ತುಗಳು ಸಮಾಜ ಹಾಗೂ ಯುವ ಜನಾಂಗದ ಮೇಲೆ ಬಹಳ ಕೆಟ್ಟ ಪರಿಣಾಮವನ್ನು ಬೀರುತ್ತಿರುವ ಈ ಕಾಲದಲ್ಲಿ, ತುಮಕೂರು ಜಿಲ್ಲೆಯ ಶ್ರೀ ಸಿದ್ಧಗಂಗಾಮಠದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ವತಿಯಿಂದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿ ಮೂಡಿಸಲು ನಿರ್ಮಿಸಲಾದ ಜನ ಜಾಗೃತಿ ವಸ್ತುಪ್ರದರ್ಶನ ಮಳಿಗೆಯು, ವಸ್ತು ಪ್ರದರ್ಶನ ವೀಕ್ಷಣೆಗೆ ಬರುವ ಪ್ರತಿಯೊಬ್ಬರಿಗೂ ಜಾಗೃತಿಯ ಕೇಂದ್ರವಾಗಿದೆ.

"ಮಾನವೀಯ ಮೌಲ್ಯಗಳನ್ನು ನಾವು ಉಳಿಸಿ, ಬೆಳೆಸಬೇಕು. ನಮ್ಮ ಮಕ್ಕಳಲ್ಲಿ ಇವನ್ನು ಬೆಳೆಸೋಣ. ಮದ್ಯಮತ್ತು ಮಾದಕ ವಸ್ತು ಸೇವನೆಯಿಂದ ದೂರವಿರೋಣ, ಇವುಗಳ ವಿರುದ್ದ
ಜಾಗೃತಿ ಮೂಡಿಸೋಣ" ಎಂಬ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಸಂದೇಶ ಸೇರಿದಂತೆ ಪೂಜ್ಯ ಶ್ರೀಗಳಾದ ಶಿವಕುಮಾರಸ್ವಾಮೀಜಿ ಮತ್ತುಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ, ಕವಿಗಳಾದ ಕಾಳಿದಾಸ, ಸರ್ವಜ್ಞ, ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಯೋಗ ಗುರು ರಾಮದೇವ್ ಅವರ ಮದ್ಯ ಮತ್ತು ಮಾದಕ ವಸ್ತುಗಳ ಕುರಿತು ಅವರುಗಳ ಚಿತ್ರದೊಂದಿಗಿರುವ ಜನ ಜಾಗೃತಿ ಸಂದೇಶಗಳು ಮಳಿಗೆಯನ್ನು ಮತ್ತಷ್ಟು ಆಕರ್ಷಣೀಯವಾಗಿ ಮಾಡಿದೆ.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ, ಈ ಜನ ಜಾಗೃತಿ ಮಳಿಗೆಯನ್ನು ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಮಹೇಶ್, ಶ್ರೀ ಸಿದ್ಧಗಂಗಾಮಠದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು