LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವ

ವಿಜಯಪುರ : ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಶ್ರೀ ಸಿದ್ಧೇಶ್ವರ ಅಪ್ಪಗಳ ಗುರುನಮನ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಇಂದು ಗುರುವಾರ ಬೆಳಿಗ್ಗೆ 6 ಗಂಟೆಗೆ ನಾಡಿನ ಸ್ವಾಮೀಜಿಗಳು, ಮಠಾಧೀಶರು ಹಾಗೂ ಭಕ್ತರು ಅಪ್ಪಗಳವರ ಕುರಿತಾದ ವೇದ ಮೂರ್ತಿ ಜ್ಞಾನ ಜ್ಯೋತಿ ಹಾಡಿನ ಮೂಲಕ ಚಾಲನೆ ನೀಡಿದರು. ಆಶ್ರಮದ ಅಧ್ಯಕ್ಷ ಗುರುಗಳಾದ ಶ್ರೀ ಪೂಜ್ಯ ಬಸವಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಜಪಯಜ್ಞದ ಮೂಲಕ ಗುರುವಿಗೆ ನಮಸ್ಕಾರಗಳು, ಶಿವನಿಗೆ ಆರಾಧನೆ ಎನ್ನುವ ಅರ್ಥವನ್ನು ಕೊಡುವ `ಶಿವಾಯ ನಮಃ ಓಂ, ಶಿವಾಯ ನಮಃ ಓಂ' ಎಂಬ ಮಂತ್ರವನ್ನು ಪಠಿಸಲಾಯಿತು. ನಂತರ ಒಂದು ನಿಮಿಷದ ಮೌನ ಧ್ಯಾನ ಸಲ್ಲಿಸಿ, ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳಿಗೆ ಅತ್ಯಂತ ಭಕ್ತಿಯಿಂದ ಸ್ಮರಿಸಲಾಯಿತು.

`ಜ್ಯೋತಿ...ಬೆಳಗುತ್ತಿದೆ, ವಿಮಲಪರಂ ಜ್ಯೋತಿ...ಬೆಳಗುತ್ತಿದೆ' ಮಂತ್ರದೊಂದಿಗೆ ಜಪಯಜ್ಞವನ್ನು ಪೂರ್ಣ ವಿರಾಮ ನೀಡಲಾಯಿತು. ಸಾವಿರಾರು ಭಕ್ತರು ಜಪಯಜ್ಞ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುದೇವ ಶ್ರೀ ಸಿದ್ಧೇಶ್ವರ ಅಪ್ಪಗಳವರಿಗೆ ಶ್ರದ್ಧೆ-ಭಕ್ತಿಯ ನಮನಗಳನ್ನು ಸಲ್ಲಿಸಿದರು. ನಂತರ ಶ್ರೀ ಸಿದ್ಧೇಶ್ವರ ಸ್ವಾಮೀಜಿಳ ವಿಡಿಯೋ ಪ್ರವಚನ ಪ್ರಸಾರಗೊಳಿಸಲಾಯಿತು.
ಬೆಳಿಗ್ಗೆ 8 ಗಂಟೆಗೆ ಶ್ರೀ ಮಲ್ಲಿಕಾಜುನ ಶಿವಯೋಗಿಗಳವರ ಪ್ರಣವ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಾಡಿನ ನೂರಾರು ಸ್ವಾಮೀಜಿಗಳು, ಮಠಾಧೀಶರು, ಗುರುದೇವರ ಶಿಷ್ಯ ಬಳಗ ಹಾಗೂ ಸರ್ವ ಭಕ್ತರು ಪೂಜೆಯಲ್ಲಿ ಭಾಗವಹಿಸಿ ಶ್ರೀ ಪೂಜ್ಯ ಮಲ್ಲಿಕಾರ್ಜು ಸ್ವಾಮೀಜಿಗಳು ಹಾಗೂ ಗುರುದೇವ ಶ್ರೀ ಸಿದ್ಧೇಶ್ವರ ಅಪ್ಪಗಳವರಿಗೆ ಪುಷ್ಫ ನಮನ ಸಲ್ಲಿಸಿ ಪೂಜ್ಯರ ಆಶೀರ್ವಾದ ಪಡೆದುಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು