LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸಂಕ್ರಾಂತಿಗೆ ಮಗಳ ಮನೆಗೆ ಬಂದ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಅಳಿಯ!

ಬೆಳಗಾವಿ: ಸುಗ್ಗಿ ಕಾಲದ ಹಬ್ಬದಲ್ಲಿ ಮನೆಯಲ್ಲಿ ಸಂಭ್ರಮದ ಬದಲು ಸೂತಕ ಆವರಿಸಿದೆ. ಹೌದು... ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ವಿವಿಧ ರೀತಿಯ ಅಡುಗೆಗಳನ್ನು ಮಾಡಿಕೊಂಡು ಮಗಳಿಗೆ ಕೊಡಲು ಬಂದಿದ್ದ ಅತ್ತೆಯನ್ನು ಅಳಿಯನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮೃತ ಮಹಿಳೆಯನ್ನು ಬೆಳಗಾವಿ ಕಲ್ಯಾಣ ನಗರದ ನಿವಾಸಿ 43 ವರ್ಷದ ರೇಣುಕಾ ಶ್ರೀಧರ ಪದಮುಕಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು 24 ವರ್ಷದ ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ ಎಂದು ತಿಳಿದುಬಂದಿದೆ.

ಆರೋಪಿ ಶುಭಂ 7 ತಿಂಗಳ ಹಿಂದಷ್ಟೇ ರೇಣುಕಾ ಪುತ್ರಿ ಛಾಯಾಳನ್ನು ವಿವಾಹವಾಗಿದ್ದನು. ಹೀಗಾಗಿ ರೇಣುಕಾ ಮಗಳಿಗೆ ಎಳ್ಳು ಬೆಲ್ಲದ ಜೊತೆ ಸಂಕ್ರಾಂತಿ ಹಬ್ಬದೂಟ ಕೊಡುವುದಕ್ಕೆ ಮಗಳ ಮನೆಗೆ ಬಂದಿದ್ದರು. ಆದರೆ ಈ ವೇಳೆ ಹಣ ಕೊಡಲಿಲ್ಲವೆಂದು ಶುಭಂ ಅತ್ತೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಛಾಯಾ ಚಿಕಿತ್ಸೆಗೆ ಖರ್ಚಾಗಿದ್ದ ಹಣ ನೀಡುವಂತೆ ಶುಭಂ ಕೇಳುತ್ತಿದ್ದನು. ಇಂದು ಮನೆಗೆ ಬಂದಾಗ ನೇರವಾಗಿಯೇ ಅತ್ತೆಗೆ ಹಣ ನೀಡುವಂತೆ ಕೇಳಿದ್ದಾನೆ. ಅದಕ್ಕೆ ರೇಣುಕಾ ಕೊಡಲ್ಲ ಎಂದು ಹೇಳಿದ್ದರಿಂದ ಶುಭಂ ಏಕಾಏಕಿ ಅತ್ತೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ತೀವ್ರ ರಕ್ತ ಸ್ರಾವವಾಗಿ ಮನೆಯಲ್ಲೇ ಪ್ರಾಣ ಬಿಟ್ಟಿದ್ದಾರೆ. ಆರೋಪಿ ಶುಭಂ ಬಿರ್ಜೆ ಹಾಗೂ‌ ಆತನ ಪೋಷಕರನ್ನು ಶಹಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು