LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸಂಜೆ ಕ್ರಿಕೆಟ್ ವಿಜಯೋತ್ಸವ ಟಿ20 ವಿಶ್ವಕಪ್ ಗೆದ್ದ ಆಟಗಾರರಿಗೆ ಮುಂಬೈನಲ್ಲಿ ಅಭಿನಂದನೆ

ದೆಹಲಿ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿಜಯ ಸಾಧಿಸಿದ ಭಾರತ ತಂಡ ಆಟಗಾರರಿಗೆ ಇಂದು ಸಂಜೆ ಸನ್ಮಾನ ಮಾಡಿ ಗೌರವಿಸಲಾಗುವುದು.
ಮುಂಬೈನ ವಾಂಖೇಡ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಬಿಸಿಸಿಐನಿಂದ ಹಮ್ಮಿಕೊಳ್ಳಲಾಗಿದೆ. ದೆಹಲಿಯಿಂದ ಸಂಜೆ ಮುಂಬೈಗೆ ಆಗಮಿಸುವ ಆಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ವಾಂಖೇಡ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುವುದು.

ಮುಂಬೈನ ನಾರೀಮನ್ ಪಾಯಿಂಟ್‍ನಿಂದ ವಾಂಖೇಡ ಕ್ರೀಡಾಂಗಣವರೆಗೂ ಸುಮಾರು 2.8 ಕಿ.ಮೀ ವಿಜಯೋತ್ಸವ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಕ್ರಿಕೆಟ್ ಆಟಗಾರರು ಮತ್ತು ಸಿಬ್ಬಂದಿಗೆ ಬಿಸಿಸಿಐ ವತಿಯಿಂದ 125 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು. ಇಂದು ವಿಶ್ವಕಪ್‍ನೊಂದಿಗೆ ಭಾರತ ಕ್ರಿಕೆಟ್ ತಂಡ ಬಾರ್ಬಡೋಸ್‍ನಿಂದ ದೆಹಲಿಗೆ ಆಗಮಿಸಿತು. ಆಟಗಾರರನ್ನು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿ ಸಹಸ್ರಾರು ಮಂದಿ ಕ್ರಿಕೆಟ್ ಅಭಿಮಾನಿಗಳು ಜಯಘೋಷದೊಂದಿಗೆ ಸ್ವಾಗತಿಸಿದರು. ದೆಹಲಿ ವಿಮಾನ ನಿಲ್ದಾಣದಿಂದ ಐಟಿಸಿ ಮೌರ್ಯ ಹೋಟೆಲ್‍ಗೆ ತೆರಳಿದರು.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಅವರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‍ನಲ್ಲಿ ವಿಶ್ವ ಕಪ್ ಗೆದ್ದ ಖುಷಿಗೆ ಭಾರತ ತಂಡದ ಜತೆಗೆ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.ನಂತರ ಭಾರತ ತಂಡವು 12.00ಗಂಟೆಗೆ ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಮೋದಿ ಅವರಿಂದ ಗೌರವ ಸನ್ಮಾನ ಸ್ವೀಕರಿಸಿದರು.

ಈ ಸಂಭ್ರಮದಲ್ಲಿ ವಿರಾಟ್, ರೋಹಿತ್, ಹಾರ್ದಿಕ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಿದ್ದರು. ಕೋಚ್ ರಾಹುಲ್ ದ್ರಾವಿಡ್ ಕೇಕ್ ಕಟ್ ಮಾಡುವ ಮೂಲಕ ಇಂಡಿಯಾ ತಂಡದ ಸಂಭ್ರಮವನ್ನು ಹೆಚ್ಚಿಸಿದರು.ಭಾರತ ಶನಿವಾರದಂದು ದಕ್ಷಿಣ ಆಫ್ರಿಕಾವನ್ನು ಏಳು ರನ್‍ಗಳಿಂದ ಸೋಲಿಸಿ, ವಿಜಯವನ್ನು ಸಾಧಿಸಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು