LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಪಾದಕರೊಂದಿಗೆ ಪೊಲೀಸ್ ಸಂವಾದ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಸಂಪಾದಕರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.ಬೆಂಗಳೂರು ನಗರ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನಡೆದ ನಗರ ಚಲನಾಶೀಲತೆ, ಸವಾಲುಗಳು ಮತ್ತು ಪೊಲೀಸರ ಪಾತ್ರ ವಿಷಯದ ಮೇಲೆ ಪೊಲೀಸರು ಸಂಪಾದಕರ ಜತೆಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪರಸ್ಪರ ವಿಷಯಗಳನ್ನು ವಿನಿಯಮ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪರಮೇಶ್ವರ್, ನಗರದಲ್ಲಿ ಸಂಚಾರ ಸುಧಾರಣೆಗೆ ಜನರು ಸಹಕಾರ ನೀಡಬೇಕು. ಆಗ ಮಾತ್ರ ಸಂಚಾರಿ ಪೊಲೀಸರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಮಾ.3ರಂದು ರಾಜ್ಯ ಬಜೆಟ್ ಮಂಡನೆ ಯಾಗಲಿದ್ದು, ಸುಧಾರಣಾ ಕ್ರಮಕ್ಕೆ ಹೆಚ್ಚಿನ ಅನುದಾನ ಬೇಕಿದೆ. ಈ ಬಾರಿ ಬಜೆಟ್‍ನಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚಿನ ಅನುದಾನ ಮೀಸಲಿಡಲು ಕೋರಲಾಗುವುದು. ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಿದೆ. ಕಳೆದ ವರ್ಷ 55ಲಕ್ಷ ವಾಹನಗಳ ಮಾಲೀಕರು ಚಾಲಕರಿಂದ 89 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಇದೇ ವೇಳೆ ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಸಚಿವರು ಉದ್ಘಾಟಿಸಿದರು.ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರದ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂವಾದದಲ್ಲಿ ಪಾಲ್ಗೊಂಡಿದ್ದ ಸಂಪಾದಕರಿಗೆ ನೆನಪಿಕೆ ಕಾಣಿಕೆ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಇಂದುಸಂಜೆ ಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ. ಪದ್ಮನಾಗರಾಜ್ ಅವರಿಗೆ ನೆನಪಿನ ಕಾಣಿಕೆ ನೀಡಿ ಸಚಿವರು ಸಮಾರಂಭದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು