LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂಪುಟ ಚರ್ಚೆಯಿಲ್ಲ ಸಂಪುಟ ಪುನಾರಚನೆ ಬಗ್ಗೆ ಡಿಸಿಎಂ ಡಿಕೆಶಿ ಸ್ಪಷ್ಟನೆ

ದೆಹಲಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಂಪುಟ ಪುನಾರಚನೆ ಸಂದರ್ಭ ಬಂದಿಲ್ಲ ಎಂದಿರುವ ಅವರು, ಈ ಬಗ್ಗೆ ಎಐಸಿಸಿ ವರಿಷ್ಠರೊಂದಿಗೂ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ನಡೆಸಿದ್ದೇನೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಇಂದು ನಡೆಯಲಿರುವ ಸಿಡಬ್ಲ್ಯೂಸಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ಕೇಳಿಬರುತ್ತಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ ಮಾಧ್ಯಮಗಳಲ್ಲಿ ರಾಜಕೀಯ ನಡೆಯಲ್ಲ ಎಂದು ಹೇಳುವ ಮೂಲಕ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಾಸನದಲ್ಲಿ ಜನಾಂದೋಲನ ಹೆಸರಿನಲ್ಲಿ ನಡೆಸುತ್ತಿರುವ ಸ್ವಾಭಿಮಾನಿ ಸಮಾವೇಶದ ಸಂಬಂಧ ಯಾವುದೇ ಪತ್ರ ವರಿಷ್ಠರಿಗೆ ಬರೆದಿರುವ ಬಗ್ಗೆ ತಮಗೆ ತಿಳಿದುಬಂದಿಲ್ಲ. ಸಮಾವೇಶ ನಡೆಸುವ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಬಳಿ ಮಾತನಾಡಿದ್ದಾರೆ. ಸಮಾವೇಶ ನಡೆಸುವ ಬಗ್ಗೆಯೂ ನನಗೆ ತಿಳಿಸಿದ್ದಾರೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು