LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಂಸತ್ ಚಳಿಗಾಲ ಅಧಿವೇಶನ: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ; ಉಭಯ ಸದನಗಳ ಕಲಾಪ ನ.27ಕ್ಕೆ ಮುಂದೂಡಿಕೆ

ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.

ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಸ್ಕೆ ನೂರುಲ್ ಇಸ್ಲಾಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬಳಿಕ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು ಮಂಡಿಸಲು ಮುಂದಾಗಿತ್ತು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತರಾತರಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಈ ನುವೆ ಪ್ರತಿಪಕ್ಷಗಳು ಯಾವುದೇ ಮಸೂದೆ ಮಂಡನೆ ಮಾಡುವ ಮುನ್ನ ಮಣಿಪುರದಲ್ಲಿ ಮರುಕಳಿಸಿರುವ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಗದ್ಧಲ ಸೃಷ್ಟಿಸಿದ್ದರಿಂದ ಸಭಾಪತಿ ಕಲಾಪವನ್ನು ಮುಂದೂಡಿದರು.

ನವೆಂಬರ್ 26ರ ಸಂವಿಧಾನ ದಿನ ಹಿನ್ನೆಲೆಯಲ್ಲಿ ಅಧಿವೇಶನ ನಡೆಸದಿರಲು ಹಾಗೂ ಉಭಯ ಸದನಗಳ ಸದಸ್ಯರೊಂದಿಗೆ ಸಂವಿದಾನ ಭವನದಲ್ಲಿ ಸಂವಿಧಾನ ದಿನವನ್ನು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು