LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

`ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳ ತಾಯಿ'

ಕನಕಪುರ: ಸಂಸ್ಕೃತ ಭಾಷೆ ಎಲ್ಲಾ ಭಾಷೆಗಳಿಗೆ ತಾಯಿ, ನಮ್ಮ ಪರಂಪರೆಯಲ್ಲಿ ಪೂಜೆ ಪುನಸ್ಕಾರಗಳಲ್ಲಿ ಬಳಸುವಂತಹ ಭಾಷೆ ಸಂಸ್ಕೃತ ಅದನ್ನು ಸರಳಗೊಳಿಸಿ ಜನಸಾಮಾನ್ಯರು ಮಾತನಾಡುವಂತೆ ಆಗಬೇಕು ಎಂದು ವಿದ್ವಾನ್ ಮಹಾಲಿಂಗಪ್ರಭು ಸ್ವಾಮಿಗಳು ತಿಳಿಸಿದರು.

ನಗರದ ಶ್ರೀ ದೇಗುಲಮಠದ ನಿರ್ವಾಣಸ್ವಾಮಿ ಕೃಪಾ ವಿದ್ಯಾಪೀಠದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ನಿರ್ವಾಣಸ್ವಾಮಿ ಸಂಸ್ಕೃತ ಪಾಠಶಾಲೆ ಮತ್ತು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹಕಾರದೊಂದಿಗೆ "ಅಸ್ಮಾಕಂ ಸಂಸ್ಕೃತ ಭಾಷಾ" ಎಂಬ ಸಂಸ್ಕೃತೋತ್ಸವ ಕಾರ್ಯಕ್ರಮ ಮತ್ತು ಜನ ಜಾಗೃತಿ ಜಾತಕ್ಕೆ ಸಂಸ್ಥೆಯ ವಿಶೇಷ ಅಧಿಕಾರಿ ಶ್ರೀ ರವಿಶಂಕರ್ ರವರ ಜೊತೆಗೂಡಿ ಚಾಲನೆ ನೀಡಿ ಮಾತನಾಡಿದ ಅವರು ಶ್ರೀ ಮಠದಲ್ಲಿ ಇಮ್ಮಡಿ ಮಹಾಲಿಂಗ ಸ್ವಾಮಿಗಳವರ ಕಾಲದಿಂದಲೂ ಎಲ್ಲಾ ಜನಾಂಗದವರು ಸಂಸ್ಕೃತವನ್ನು ಕಲಿತು ಇಂದು ಸಮಾಜದ ಪ್ರಮುಖ ಸ್ಥಳಗಳಲ್ಲಿ ಶಿಕ್ಷಕರಾಗಿ,ಪುರೋಹಿತ ರಾಗಿ ಸಂಸ್ಕಾರವಂತವರಾಗಿ ಎಲ್ಲಾ ಕಡೆ ಕಾಣುತ್ತಿರುವುದು ನಮ್ಮ ಶ್ರೀಮಠದ ಹೆಮ್ಮೆಯ ವಿಷಯವಾಗಿದೆ ಎಂದರು.

ರಾಮನಗರ ಜಿಲ್ಲಾ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿದ್ವಾನ್ ಕೆ ಪಿ ಯೋಗಿಶ್ ಮಾತನಾಡಿ ಸಂಸ್ಕೃತ ಭಾಷೆಯು ಇಂದಿನ ವಿದ್ಯಾರ್ಥಿಗಳು ಅಧ್ಯಯನ ಮಾಡಿದರೆ ಮನಸ್ಸು ಶುದ್ಧವಾಗಿ, ನಿರ್ಮಲವಾಗಿ ಎಲ್ಲಾ ವಿಷಯಗಳಲ್ಲಿಯೂ ಆಸಕ್ತಿ ಮೂಡುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ದುರದುಂಡೇಶ್ವರ ಸ್ವಾಮಿಗಳು ಸಂಸ್ಕೃತ ಭಾಷೆಯನ್ನು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿ ಕೊಂಡು ಮುನ್ನಡೆದಾಗ ಮಾತ್ರಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆರ್. ಶಿವಯ್ಯ ಉಪನ್ಯಾಸಕ ವಿದ್ಯಾನ್ ಎಂ. ಶಿವಕುಮಾರ್, ವಿದ್ವಾನ್ ವೀರಭದ್ರಪ್ಪ, ಮಂಜುನಾಥ,ಮಲ್ಲಣ್ಣ,ವಿದುಷಿ ವಿ ಎಲ್ ಧನಲಕ್ಷ್ಮಿ, ಶ್ರೀ ಆನಂದ್ ಕುಮಾರ್ ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು