LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಂಸ್ಥೆಯ ಚೊಚ್ಚಲ ಕಾಣಿಕೆಯಾಗಿ "ಕಿರುನಗೆ" ಚಿತ್ರ ನಿರ್ಮಾಣ

ವಿಜಾಪುರ ಜಿಲ್ಲೆಯ ಮಾಜಿ ಶಾಸಕರಾದ ಡಾ|ದೇವಾನಂದ್ ಪೂ ಚವ್ಹಾಣ ಹಾಗೂ ಶ್ರೀಮತಿ ಸುನೀತಾ ದೇವಾನಂದ ಚವ್ಹಾಣ ಪುತ್ರಿ ಲತಾಶ್ರೀ ಡಿ.ಸಿ ಅವರು ಹರ್ಷಿಣಿ ಸಿನಿಮಾಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಇತ್ತೀಚೆಗೆ ಈ ನೂತನ ನಿರ್ಮಾಣ ಸಂಸ್ಥೆಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಉದ್ಘಾಟಿಸಿ, ಲತಾಶ್ರೀ.ಡಿ.ಸಿ ಅವರ ಹೊಸ ಪ್ರಯತ್ನಕ್ಕೆ ಮನತುಂಬಿ ಆಶೀರ್ವದಿಸಿದರು.

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುವ ಆಶಯ ಹೊಂದಿರುವ ಹರ್ಷಿಣಿ ಸಿನಿಮಾಸ್ ಸಂಸ್ಥೆಯು ಮೊದಲ ಚಿತ್ರವಾಗಿ "ಕಿರುನಗೆ" ಚಿತ್ರವನ್ನು ನಿರ್ಮಿಸುತ್ತಿದೆ. "ಸತ್ಯಂ" ಸೇರಿದಂತೆ ಈಗಾಗಲೇ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿರುವ ಅಶೋಕ್ ಕಡಬ "ಕಿರುನಗೆ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಹಿಳಾ ಪ್ರಧಾನ ಈ ಚಿತ್ರಕ್ಕೆ ಲತಾಶ್ರೀ ಡಿ.ಸಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಅಶೋಕ್ ಕಡಬ ಅವರದು.

ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಅವರ ತಂಡದ ಸುಕೃತ್ "ಕಿರುನಗೆ" ಗೆ ಸಂಗೀತ ನೀಡಲಿದ್ದಾರೆ. ಮಹಿಳಾ ಪ್ರಧಾನ ಚಿತ್ರವಾಗಿರುವುದರಿಂದ ಕನ್ನಡ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಒಂದು ಹೆಣ್ಣು ತನ್ನ ಪ್ರೀತಿ, ಇಷ್ಟ, ಸಂತೋಷವೆಲ್ಲವನ್ನು ತ್ಯಜಿಸಿ ಹೆತ್ತವರ ಸಂತೋಷಕ್ಕಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟು, ತಾನು ಎಲ್ಲರಂತೆ ನಗುನಗುತ್ತಾ ಇರುತ್ತಿರುವ, ಆ ಹೆಣ್ಣಿನ ನಗುವಿನ ಹಿಂದೆ ಬಚ್ಚಿಟ್ಟ ಹಲವು ನಿಗೂಢ ವಿಷಯಗಳನ್ನು ಬೆನ್ನಟ್ಟಿ ಹೊರಟ ಒಂದು ಗರ್ಭಿಣಿ ಹೆಣ್ಣು ಮಗಳಿಬ್ಬಳ ಸುತ್ತ ತೆರೆದು ಕೊಳ್ಳುವ ಒಂದು ಭಾವನಾತ್ಮಕ ಕಥೆಯೇ ಈ "ಕಿರುನಗೆ " "A Smile Can Hide So much ".

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು