LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban | Politics News

ಸಿಎಂರಿಂದ ಎಪಿಎಂಸಿ ದರ್ಶನ

ಯಶವಂತಪುರ ಮಾರುಕಟ್ಟೆಯ ಸ್ಥಿತಿಗತಿ ಸಮಸ್ಯೆ ಆಲಿಕೆ



ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಎಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳಿಗ್ಗೆ 6ಗಂಟೆ ಸುಮಾರಿಗೆ ಭೇಟಿ ನೀಡಿದ ಅವರು ಮಾರುಕಟ್ಟೆಯಲ್ಲಿ ನಡೆಯುವ ವಹಿವಾಟು ಮತ್ತು ಸಮಸ್ಯೆಗಳ ಬಗ್ಗೆ ಖುದ್ದಾಗಿ ವೀಕ್ಷಿಸಿದ್ದಾರೆ. 
ರಾಜ್ಯದ ವಿವಿಧ ಭಾಗ ಸೇರಿದಂತೆ ಹೊರ ರಾಜ್ಯಗಳಿಂದ ಬರುವ ಆಲೂಗಡ್ಡೆ, ಈರುಳ್ಳಿ, ಬೆಳ್ಳುಳ್ಳಿ ಶುಂಠಿ ವ್ಯಾಪಾರಸ್ಥರ ಬಗ್ಗೆ ಪ್ರಮುಖವಾಗಿ ಗಮನ ಹರಿಸಿದ್ದಾರೆ. ಮಾರುಕಟ್ಟೆಗೆ ಬರುವ ಈರುಳ್ಳಿ ಚೀಲದ ತೂಕದ ಬಗ್ಗೆ ವ್ಯಾಪಾರಸ್ಥರ ಬಳಿ ಮಾಹಿತಿ ಪಡೆದಿದ್ದಾರೆ. ಕೆಲವರು ಅಲ್ಲಿ ನಡೆಯುತ್ತಿರುವ ಅಕ್ರಮ ವಹಿವಾಟಿನ ಬಗ್ಗೆಯೂ ಮಾಹಿತಿ ನಿಡಿದ್ದಾರೆ. ಇದೇ ಸಂದರ್ಭದಲ್ಲಿ ಮಾರುಕಟ್ಟೆ ಪರಿಶೀಲನೆ ವೇಳೆ ರಸ್ತೆ ಬದಿಯ ಸಣ್ಣ ಪೆಟ್ಟಿಗೆ ಹೋಟೆಲ್‌ಗೆ ತೆರಳಿದ ಡಿ.ಕೆ. ಶಿವಕುಮಾರ್, ಅಲ್ಲಿನ ಕೂಲಿ ಕಾರ್ಮಿಕರ ಜೊತೆಯಲ್ಲೇ ಕುಳಿತು ಇಡ್ಲಿ ಸೇವಿಸಿದರು. ಈ ವೇಳೆ ತಮ್ಮೊಂದಿಗೆ ಕುಳಿತಿದ್ದ ಕೂಲಿಕಾರರ ಉಪಹಾರದ ಬಿಲ್ ಪಾವತಿಸಲು ಮುಂದಾಗಿ ಹೋಟೆಲ್ ಮಾಲೀಕರಿಗೆ 500 ರೂ. ನೀಡಿ ಇವರ ಬಳಿ ಹಣ ಪಡೆಯಬೇಡಿ ಎಂದು ಹೇಳಿದರು.ಕೂಲಿಕಾರ್ಮಿಕರಿಗೆ ಪ್ರತಿನಿತ್ಯ ದೊರೆಯುವ ಕೂಲಿ ಹಣ ಸೇರಿದಂತೆ ಅವರ ದೈನಂದಿನ ಜೀವನ ವಹಿವಾಟಿನ ಬಗ್ಗೆ ಅವರಿಗೆ ಇರುವ ಮೂಲಸೌಕರ್ಯಗಳ ಬಗ್ಗೆ ಯೋಗಕ್ಷೇಮ ವಿಚಾರಿಸಿದ್ದಾರೆ. ಕೂಲಿ ಮಾಡುವ ಮಹಿಳೆಯರು ಬಹಳ ವರ್ಷಗಳಾದರೂ ತಮಗೆ ಸ್ವಂತ ಸೂರಿಲ್ಲ ಎಂದು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದಾರೆ. 
ಆಲೂಗಡ್ಡೆ ವಹಿವಾಟಿನ ಸ್ಥಳಕ್ಕೆ ಭೇಟಿ ನೀಡಿದ ಅವರು ಅಲ್ಲಿಯೇ ಒಂದು ಚೀಲ 50 ಕೆಜಿ ಚೀಲವನ್ನು ಕೆಳಗೆ ಸುರಿಸಿ ಹರಾಜುಪ್ರಕ್ರಿಯೆ ಸುರಿಸಿದ್ದಾರೆ. ಹರಾಜು ಪ್ರಕ್ರಿಯೆಯಲ್ಲಿ 50 ಕೆಜಿ ಚೀಲವನ್ನು 800 ರೂಗೆ ಮಾರಾಟ ಮಾಡಿದ್ದಾರೆ. ಭೇಟಿಯ ವೇಳೆ ಎಪಿಎಂಸಿ ಮಾಜಿ ಸದಸ್ಯ ಅರುಣ್ ಪರಮೇಶ್ವರ್ ಹಾಗೂ ಸ್ಥಳೀಯರು ಮಾರುಕಟ್ಟೆಯ ದುರವಸ್ಥೆ ಮತ್ತು ಅವ್ಯವಸ್ಥೆಗಳ ಕುರಿತು ದೂರು ನೀಡಿದರು.ರೈತರಿಗೆ ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಟಲಿಗೆ 20 ರೂ. ನೀಡಿ ಖರೀದಿಸಬೇಕಾದ ಸ್ಥಿತಿಯಿದೆ. ಶೌಚಾಲಯದ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ರೈತರಿಗಾಗಿ ನಿರ್ಮಿಸಲಾದ ಈ ಮಾರುಕಟ್ಟೆಯಲ್ಲಿ ಹಿಂದಿನ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿ ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸಿ, ಅದಕ್ಕೆ ಸಂಬAಧಿಸಿದ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದರು. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST