LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸಚಿವರ ಗೈರಿಗೆ ಆಕ್ಷೇಪ ಸದನದಲ್ಲಿ ಬೆರಳಿಣಿಕೆ ಹಾಜರಿಗೆ ಬಿಜೆಪಿಯವರ ಅಸಮಾಧಾನ

ಬೆಳಗಾವಿ: ವಿಧಾನಸಭೆಯಲ್ಲಿಂದು ಆಡಳಿತ ಪಕ್ಷದ ಸಾಲಿನಲ್ಲಿ ಸಚಿವರೂ ಸೇರಿದಂತೆ ಬಹುತೇಕ ಸದಸ್ಯರ ಹಾಜರಿ ಕಡಿಮೆ ಇದ್ದ ಕಾರಣ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಸಭಾ ಕಲಾಪದ ಆರಂಭದಲ್ಲಿ ಆಡಳಿತ ಪಕ್ಷದ ಸಾಲಿನಲ್ಲಿ ಸಚಿವರ ಮತ್ತು ಸದಸ್ಯರ ಕಡಿಮೆ ಹಾಜರಿ ಇದ್ದದ್ದನ್ನು ಗಮನಿಸಿ ಬಿಜೆಪಿ ಶಾಸಕ ಸುನೀಲ್‍ಕುಮಾರ್ ನಾವು ಬೆಳಿಗ್ಗೆ 10ಕ್ಕೆ ಬರುತ್ತೇವೆ.ರಾತ್ರಿ 10 ಗಂಟೆಗೆ ಸದನ ಮುಗಿಯುವವರೆಗೂ ಇರುತ್ತೇವೆ. ಆದರೆ ಆಡಳಿತ ಪಕ್ಷದ ಸದಸ್ಯರು ಸದನಕ್ಕೆ ಸರಿಯಾಗಿ ಬಾರದಿರುವುದಕ್ಕೆ ತಮ್ಮ ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ಇದಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಇದೀಗ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡಿದ್ದೇನೆ. ಪ್ರಶ್ನೆ ಕೇಳುವ ಸದಸ್ಯರು, ಉತ್ತರ ಕೊಡುವ ಸಚಿವರು ಇದ್ದಾರೆ ಎಂದು ಸುನೀಲ್‍ಕುಮಾರ್ ಅವರನ್ನು ಸಮಾಧಾನಪಡಿಸಿದರು.ನಂತರ ಸಭಾಧ್ಯಕ್ಷರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡಾಗ ಬಹುತೇಕ ಶಾಸಕರು ತಮ್ಮ ತಮ್ಮ ಪ್ರಶ್ನೆಗಳಿಗೆ ಉತ್ತರ ಪಡೆಯುವಲ್ಲಿ ಯಶಸ್ವಿಯಾದರು.ಕೆಲ ಸದಸ್ಯರು ಪ್ರಶ್ನೆ ಕೇಳಿದವರೇ ಗೈರಾಗಿದ್ದುದು ಸಹ ಸದನದಲ್ಲಿ ಕಂಡುಬಂತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು