LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಚಿವ ಆರ್.ಬಿ.ತಿಮ್ಮಾಪುರ್‍ರನ್ನು ಪೂರ್ವಭಾವಿ ಸಭೆಗೆ ಆಹ್ವಾನಿಸದೇ ಕಡೆಗಣನೆ: ಸರ್ಕಾರಕ್ಕೆ ಎಚ್ಚರಿಕೆ

ನಿನ್ನೆ ಲಿಡಕರ್ ಭವನದಲ್ಲಿ ಆಯೋಜಿಸಿದ್ದ ಡಾ. ಬಾಬು ಜಗಜೀವನ್ ರಾಂ ತರಬೇತಿ ಮತ್ತು ಸಂಶೋಧನಾ ಕೇಂದ್ರ ಹಾಗೂ ಭವನದ ಉದ್ಘಾಟನೆಯನ್ನು ಇದೇ ತಿಂಗಳ 13ನೇ ತಾರೀಖು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭಾ ಮಾಜಿ ಸ್ಪೀಕರ್ ಶ್ರೀಮತಿ ಮೀರಾ ಕುಮಾರ್‍ರವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲು ಅದರ ಸಮುದಾಯದ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳ ಜೊತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ರವರ ಅಧ್ಯಕ್ಷತೆಯಲ್ಲಿ ನಡೆದ,

ಪೂರ್ವಭಾವಿ ಸಭೆಗೆ ಸಮುದಾಯಕ್ಕೆ ಸೇರಿದ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ್ ರವರನ್ನು ಸಭೆಗೆ ಆಹ್ವಾನ ನೀಡದೆ ಕಡೆಗಣಿಸಲಾಗಿದೆ ಎಂದು ಜಾಂಬವ ಜಾಗೃತಿ ವೇದಿಕೆ ಮತ್ತು ಮತ್ತಿತರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆದಿಜಾಂಬವ ಸಮುದಾಯದ ಹಿರಿಯ ಸಚಿವರನ್ನು, ಮುಖಂಡರನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರು ಅನೇಕ ಸಭೆಗಳಿಗೆ ಆಹ್ವಾನ ನೀಡದೆ ಪದೇಪದೇ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದಿಜಾಂಬವ ಸಮುದಾಯ ಹೆಚ್ಚಿನ ಮತಗಳನ್ನು ನೀಡಿ ಪಕ್ಷವನ್ನು ಅಧಿಕಾರಕ್ಕೆ ತರಲು ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡಿದ್ದಾರೆ.

ಆದರೆ ಸಮಾಜ ಕಲ್ಯಾಣ ಸಚಿವರು ಆದಿಜಾಂಬವ ಸಮುದಾಯದ ನಾಯಕರನ್ನು ಮತ್ತು ಸಮುದಾಯವನ್ನು ಕಡೆಗಣಿಸುತ್ತಿರುವುದಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಅದರಿಂದ ಕೂಡಲೇ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದೆ ನಡೆಯುವ ಎಲ್ಲಾ ಉಪಚುನಾವಣೆಯಲ್ಲಿ ಆದಿಜಾಂಬವ ಸಮುದಾಯವು ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಜಾಂಬವ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರ.ನರಸಿಂಹಮೂರ್ತಿ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು