LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಚಿವ ಜಮೀರ್ ವಜಾಗೊಳಿಸಿ; ಸಿಎಂಗೆ ಒಕ್ಕಲಿಗರ ಆಗ್ರಹ

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘ ಹಾಗೂ ಸಭಾದ ಪದಾಧಿಕಾರಿಗಳು. ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಜಮೀರ್‌ ಅವರು ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ, ರಾಜ್ಯದ ಜನರಿಗೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಶೋಭೆ ತರುವುದಿಲ್ಲ. ಸಭ್ಯತೆಯ ಎಲ್ಲೆ ಮೀರಿ ಮಾತನಾಡುವ ವ್ಯಕ್ತಿ ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಆಗ್ರಹಿಸಿದ್ದಾರೆ.

ಜಮೀರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಲಘುವಾಗಿ ಮಾತನಾಡಿದ್ದಾರೆ. ರಾಜಕೀಯವಾಗಿ ಯಾರಿಗೂ ನೋವಾಗದಂತೆ ಟೀಕೆ-ಟಿಪ್ಪಣಿ ಮಾಡಲು ಅಭ್ಯಂತರವಿಲ್ಲ. ಆದರೆ, ವ್ಯಕ್ತಿಗತ, ಸಮಾಜದ ಹಿತಕ್ಕೆ ಧಕ್ಕೆಯಾಗುವಂತೆ ವರ್ಣದ ಬಗ್ಗೆ ನಿಂದನೆ ಅವರ ಘನತೆಗೆ ತಕ್ಕದಾಗಿರಲಿಲ್ಲ. ತಮ್ಮ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ಮತ್ತೆ ಸಮರ್ಥನೆ ಮಾಡಿಕೊಂಡಿದ್ದಾರೆ. ಒಕ್ಕಲಿಗ ಸಮಾಜ ಇಂತಹ ನಡೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ವಕ್ಫ್‌ಬೋರ್ಡ್‌ ಮೂಲಕ ಹಿಂದೂಗಳ ಭೂಮಿ ಕಬಳಿಸಲು ಯತ್ನಿಸುತ್ತಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ಇದೇ ರೀತಿ ಮಾತು ಮುಂದುವರಿಸಿದರೆ ಒಕ್ಕಲಿಗರು ಬೀದಿಗಿಳಿಯಬೇಕಾಗುತ್ತದೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು