LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಚಿವ ಶಾಸಕರ ಔತಣ ಕೂಟಕ್ಕೆ ಅಶೋಕ್ ವ್ಯಂಗ್ಯ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ನಿನ್ನೆರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್, ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್‍ನಲ್ಲಿ ನಿಮ್ಮ (ಡಿಕೆ ಶಿವಕುಮಾರ್) ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ.

ಸ್ವಾಮಿ ಡಿಕೆ ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅಶೋಕ್ ಪ್ರಸ್ತಾಪ ಮಾಡಿದ್ದಾರೆ.`ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ 15 ರಷ್ಟು ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತದೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ?

ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ' ಎಂದು ಅಶೋಕ್ ಕುಹಕವಾಡಿದ್ದಾರೆ.ಗುರುವಾರ ರಾತ್ರಿ ನಡೆದ ಸಿದ್ದರಾಮಯ್ಯ ಬಣದ ಡಿನ್ನರ್ ಮೀಟಿಂಗ್ ರಾಜಕೀಯ ವಲಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಎಲ್ಲದಕ್ಕೂ ಮಿಗಿಲಾಗಿ, ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಈ ಸಭೆ ಆಯೋಜಿಸಿದ್ದು ಸಾಕಷ್ಟು ಕುತೂಹಲಗಳನ್ನು ಸೃಷ್ಟಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು