ದೆಹಲಿ/ಮಂಗಳೂರು: ೨೦೧೨ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿಯ ಕೊಲೆ ಪ್ರಕರಣ ಸಂಬAಧ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಸ್ ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹೊಸದಾಗಿ ತನಿಖೆಗೆ ಕೋರ್ಟ್ ಆದೇಶಿಸಿದ್ದು, ೩ ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಆ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಈ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.
ಸೌಜನ್ಯ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದ್ದು, ಹೊಸ ತಂಡದಿಂದ ಸ್ವತಂತ್ರವಾಗಿ ಮರು ತನಿಖೆ ನಡೆಸುವಂತೆ ಸೂಚಿಸಿದೆ. ಪ್ರಕರಣದ ತನಿಖೆ ಮತ್ತು ಸಾಕ್ಷ್ಯ ಗಳ ಕುರಿತು ಈ ಹಿಂದೆ ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಸಂತೋಷ್ ರಾವ್ ನಿರಪರಾಧಿ, ಪ್ರಕರಣವನ್ನು ಬೇರೆ ಯಾರೋ ನಡೆಸಿದ್ದಾರೆ ಎಂಬುದು ಅರ್ಜಿದಾರರ ಪರ ವಕೀಲರ ವಾದವಾಗಿತ್ತು. ೧೪೦-೧೫೦ ಪುಟಗಳ ಸಾಕ್ಷ÷್ಯವನ್ನು ತೆಗೆದುಹಾಕಲಾಗಿದೆ ಎಂಬ ಆರೋಪವೂ ವಿಚಾರಣೆಯಲ್ಲಿ ಪ್ರಸ್ತಾಪವಾಗಿತ್ತು.