LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ಸಿಎಂ, ಮುಖಂಡರು


ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮತ್ತು ಮತ್ತಿತರ ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ವಾಪಸ್ ಹೋದ ಬೆನ್ನಲ್ಲೇ ಮುಖ್ಯಮಂತ್ರಿ ಸೇರಿ ಪಕ್ಷದ ಮುಖಂಡರು ಸತೀಶ್ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ ರಾತ್ರಿಯೇ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸತೀಶ್ ಅವರ ಸರ್ಕಾರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಸುಮಾರು 1 ಗಂಟೆಗೂ ಹೆಚ್ಚು  ಕಾಲ ಮಾತುಕತೆ ನಡೆಸಿ ಅವರಿಗೆ ಸಮಾಧಾನ ಮಾತುಗಳನ್ನು ಆಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವರಾದ ಕೆ.ಎನ್. ರಾಜಣ್ಣ, ಬಿ. ನಾಗೇಂದ್ರ ಅವರು ಸೇರಿದಂತೆ ಅನೇಕ ಮುಖಂಡರು ಸತೀಶ್ ಅವರನ್ನು ಭೇಟಿಯಾಗಿ ಬಹಳ ಹೊತ್ತಿನ ಕಾಲ ಸಮಾಲೋಚನೆ ನಡೆಸಿ ತಮ್ಮದೇ ರೀತಿಯಲ್ಲಿ ಮಾತುಕತೆ ಮೂಲಕ ಧೈರ್ಯ ತುಂಬಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST