LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಮರ್ಥ ನಾಯಕ

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ "ಅಥಣಿ" ಚಿತ್ರದ "ಬಾರೆ ಬಾರೆ" ಎಂಬ ಹಾಡು ತುಮಕೂರಿನ ದಿಬ್ಬೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಕೆ.ಪಿ.ಸಿ.ಸಿ ರಾಜ್ಯ ಉಪಾಧ್ಯಕ್ಷರಾದ ಮುರಳಿಧರ ಹಾಲಪ್ಪ ಹಾಗೂ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ರಾಜು ಚಿತ್ರಪುರ ಬರೆದಿರುವ ಈ ಹಾಡನ್ನು ಸ್ವಾತಿ ಶಂಕರ್ ಹಾಗೂ ಹರ್ಸಿವ್ ಭಘೀರ ಹಾಡಿದ್ದಾರೆ. ಹರ್ಷ ಕುಗೋಡು ಸಂಗೀತ ನೀಡಿದ್ದಾರೆ. ಅಭಯ ಖುಷಿ ಮ್ಯೂಸಿಕ್ ಚಾನಲ್ ನಲ್ಲೇ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.ನಿರ್ದೇಶಕರಾಗಿ ಈಗಾಗಲೇ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಸಮರ್ಥ ಅವರು ಈ ಚಿತ್ರದ ಮೂಲಕ ನಾಯಕ ನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಮಧು ಈ ಚಿತ್ರದ ನಾಯಕಿ. ನಾಗೇಂದ್ರ ಅರಸ್, ಶೋಭರಾಜ್, ಭವ್ಯ ಯತಿರಾಜ್, ಬಲರಾಜವಾಡಿ, ರಾಕೇಶ್ ಪೂಜಾರಿ, ಮೂರ್ತಿ, ವಿಷ್ಣುಪ್ರಿಯ, ಶ್ರೀನಿಧಿ, ಇಂದ್ರ ಕುಮಾರ್, ಸಿ ಜಿ ದಿಬ್ಬೂರು ಮುಂತಾದವರು ತಾರಾಗಣದಲ್ಲಿದ್ದಾರೆ.

ರೈತಪರ ಕಾಳಜಿಯನ್ನು ಹೊಂದಿರುವ ಈ ಚಿತ್ರದಲ್ಲಿ ಕ್ರೈಂ..ಲವ್ ..ಸಸ್ಪೆನ್ಸ್.. ಮತ್ತು ಕಾಮಿಡಿ ಹೀಗೆ ಪ್ರೇಕ್ಷಕನಿಗೆ ಬೇಕಾದ ಎಲ್ಲಾ ಅಂಶಗಳು ಇದೆ.ಈ ಚಿತ್ರದಲ್ಲಿ ಹರ್ಷ ಕೂಗೋಡು ಸಂಗೀತ ನೀಡಿರುವ ಐದು ಹಾಡುಗಳಿದೆ. ಆ ಪೈಕಿ ಮೊದಲ ಹಾಡಾಗಿ "ಬಾರೆ ಬಾರೆ" ಐಟಂ ಸಾಂಗ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಹಾಡುಗಳು ಅನಾವರಣವಾಗಲಿದೆ.
ಸಂದೀಪ್ ಹೊನ್ನಾಳಿ ಛಾಯಾಗ್ರಹಣ ಹಾಗೂ ಸುನಯ್ ಜೈನ್ ಅವರ ಸಂಕಲನವಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ.

ತುಮಕೂರು, ಬೆಂಗಳೂರು, ರಾಮನಗರ ಹೊನ್ನಾವರ, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡ ಇದೆ. ಊರಿನ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವ "ಅಥಣಿ" ಚಿತ್ರಕ್ಕೆ ಧರಣಿ ಮಂಡಲ ಮಧ್ಯದೊಳಗೆ ಎಂಬ
ಅಡಿಬರಹವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು