LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

`ಸಮಸ್ಯೆಗಳನ್ನು ಸಂಯಮ ಸಮಚಿತ್ತದಿಂದ ನಿಭಾಯಿಸಿದ ಧೀಮಂತ'

ಬೆಳಗಾವಿ: ರಾಜಕಾರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಎದುರಾದ ಹತ್ತು-ಹಲವು ಸಮಸ್ಯೆಗಳನ್ನು ಸಂಯಮ,ಸಮಚಿತ್ತ ಹಾಗೂ ದೂರದೃಷ್ಟಿತ್ವ ಸಮರ್ಥವಾಗಿ ನಿಭಾಯಿಸಿದ ಕೀರ್ತಿಗೆ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (ಎಸ್‍ಎಮ್ ಕೆ)ಅವರು ಪಾತ್ರ ರಾಗಿದ್ದರು.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅವರಿಗೆ ಹಲವಾರು ಕ್ಲಿಷ್ಟಕರ ಸಮಸ್ಯೆಗಳು ಎದರಾಗಿದ್ದವು.

ಒಂದೆಡೆ ರಾಜ್ಯದಲ್ಲಿ ರಾಜ್ಯದಲ್ಲಿ ತಲೆದೋರಿದ್ದ ತೀವ್ರ ಬರಗಾಲ ಪರಿಸ್ಥಿತಿ, ಮತ್ತೊಂದೆಡೆ ಕಾಡುಗಳ್ಳ ವೀರಪ್ಪನ್ ನಿಂದ ವರನಟ ಡಾ.ರಾಜಕುಮಾರ್ ಅಪಹರಣ ಸೇರಿದಂತೆ ಹಲವಾರು ಸಮಸ್ಯೆಗಳು ಎದರಾಗಿದ್ದವು. ಎದೆಗುಂದದೆ ಅವುಗಳನ್ನು ನಿಭಾಯಿಸಲು ಅವರು ಸಾಕಷ್ಟು ಬೆವರು ಹರಿಸಿದ್ದರು. ಅದೇ ಸಂದರ್ಭದಲ್ಲಿ ಹಿಂದುಳಿದ ಹೈದರಾಬಾದ್ -ಕರ್ನಾಟಕ ಭಾಗದಲ್ಲಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೊಳಿಸಿದರು.

ಮಳೆಯ ಅಭಾವ ಕಾರಣ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕುಸಿದಿತ್ತು. ಅಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಕುರಿತು ತಮಿಳುನಾಡು ಸರ್ಕಾರ ಅನಗತ್ಯವಾಗಿ ತೆಗೆದ ತಗಾದೆ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಆ ಸಂದರ್ಭದಲ್ಲಿ ಅವರು ನೀರಾವರಿ ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಲು ಹೆಣಗಾಡುವಂತಾಗಿತ್ತು.

ಜೊತೆಗೆ ಕಾನೂನು ಹೋರಾಟ ನಡೆಸುವಲ್ಲಿಯೂ ಹಿಂದೆ ಬೀಳಲಿಲ್ಲ. ರಾಜ್ಯದ ನೆಲ, ಜಲ ರಕ್ಷಣೆ ಮಾಡಲು ಕಟಿಬದ್ಧತೆ ಪ್ರದರ್ಶಿಸಿದ್ದ ಅವರು, ನೀರಾವರಿ ವಿಚಾರದಲ್ಲಿ ಅನುಭವಿ ರಾಜಕಾರಣಿ ಎಚ್.ಡಿ.ದೇವೇಗೌಡ ಅವರ ಸಲಹೆ ಸೂಚನೆಗಳನ್ನು ಪಡೆಯಲು ಮುಂದಾದದ್ದು ಅವರ ಮುತ್ಸದ್ದಿ ತನಕ್ಕೆ ನಿದರ್ಶನವಾಗಿದೆ.
ವೀರಪ್ಪನ್ ವಶದಲ್ಲಿ 108 ದಿನಗಳ ಕಾಲ ಇದ್ದ ವರನಟ ರಾಜ್ ಕುಮಾರ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಗೊಳಿಸಲು ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ.. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಕೃಷ್ಣ ಅವರು, ಈ ವಿಚಾರದಲ್ಲಿ ಅತ್ಯಂತ ಜಾಣ್ಮೆ ಮತ್ತು ತಾಳ್ಮೆ ಯಂದಲೇ ವರ್ತಿಸಿ ಬಿಕ್ಕಟ್ಟು ಪರಹರಿಸಿದ್ದು ಅವರ ರಾಜಕೀಯ ಜೀವನದಲ್ಲಿ ಬಹು ದೊಡ್ಡ ಸಾಧನೆಯೇ ಸರಿ...

ಹೀಗೆ ಸಾಲು ಸಾಲು ಸವಾಲುಗಳನ್ನು ಚಾಣಾಕ್ಷತನದಿಂದ ನಿಭಾಯಿಸಿದ್ದ ಅವರ ಸಮಯೋಚಿತ ರೀತಿ ನೀತಿಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ.. ಮುಂದಿನ ಪೀಳಿಗೆಯ ರಾಜಕಾರಣಿ ಗಳಿಗೆ ದಾರಿದೀಪಗಳಾಗಲಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು