ಬೆಂಗಳೂರು: ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಹೇಳಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್, ಈ ಬಗ್ಗೆ ಸರ್ಕಾರ ಸಮಗ್ರ ಶ್ವೇತಪತ್ರ ಹೊರಡಿಸುವಂತೆ ಒತ್ತಾಯಿಸಿದ್ದಾರೆ.
ಇಂದು ವಿಧಾನಪರಿಷತ್‌ನ ಕಲಾಪದಲ್ಲಿ ಆರಂಭದಲ್ಲಿಯೇ ಮಾತನಾಡಿದರು. ಸರ್ಕಾರದ ಆರ್ಥಿಕ ಇಲಾಖೆಯ ಟಿಪ್ಪಣಿ ಪ್ರಕಾರ ಆರ್ಥಿಕ ಕೊರತೆ ಎದುರಿಸಲಾಗುತ್ತಿದೆ. ಹಾಗಾಗಿ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.