LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸರ್ಕಾರಿ ನೌಕರರ ಸಂಘದ ಚುನಾವಣೆ: ರಾಜಮ್ಮ ನಾಮಪತ್ರ ಸಲ್ಲಿಕೆ

ನೆಲಮಂಗಲ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು ತಾಲ್ಲೂಕಿನ ಸರ್ಕಾರಿ ನೌಕರರು ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ.ಒಟ್ಟು 29 ಮಂದಿ ಪದಾಧಿಕಾರಿಗಳಿರುವ ತಾಲ್ಲೂಕು ಘಟಕಕ್ಕೆ ಸಂಘದ ಸದಸ್ಯತ್ವವನ್ನು ಪಡೆದಿರುವ ಸದಸ್ಯರು ಚುನಾವಣೆ ಪ್ರಕ್ರಿಯೆ ಮೂಲಕ ನಾಮಪತ್ರಸಲ್ಲಿಸಲು ಅ.18ಕೊನೆಯದಿನವಾಗಿದ್ದು ಅ.19 ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ.

ಅ.21 ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ಅ.28 ರಂದು ಬೆಳ್ಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆವರೆಗೆ ನಗರದ ಭಿನ್ನಮಂಗಲದಲ್ಲಿರುವ ಸಂಘದ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಅದೇದಿನ ಮತದಾನದ ಬಳಿಕ ಮತ ಎಣಿಕೆ ಬಳಿಕ ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಚುನಾವಣಾಧಿಕಾರಿ ದೇವಕಿ ಹಾಗೂ ಸಹಾಯಕ ಚುನಾವಣಾಧಿಕಾರಿ ಎನ್.ಎಲ್.ನಾರಾಯಣ್ ತಿಳಿಸಿದರು.

ತಾಲ್ಲೂಕಿನಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿರುವ ನೌಕರರು ಸೇರಿ ಒಟ್ಟಾರೆ ಸಾವಿರಾರು ಮಂದಿ ನೌಕರರಿದ್ದಾರೆ. ಮತದಾರರ ಸಂಖ್ಯೆ ಅನುಗುಣವಾಗಿ 29 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ತಾಲ್ಲೂಕು ಘಟಕದಲ್ಲಿ ಒಟ್ಟು 1445 ಮತದಾರರಿದ್ದು ಸರ್ಕಾರಿ ಪ್ರಾಥಮಿಕ ಶಾಲೆಯ 701 ಹಾಗೂ ಪ್ರೌಡ ಶಾಲೆಗಳ 132 ಶಿಕ್ಷಕರು ಮತದಾನದ ಹಕ್ಕುಪಡೆದುಕೊಂಡು ಶಿಕ್ಷಣ ಇಲಾಖೆಯಲ್ಲಿ ಸಿಂಹ ಪಾಲನ್ನು ಹೊಂದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯ 169ಮತದಾರರನ್ನು ಹೊಂದಿದ್ದು ಎರಡನೆ ಸ್ಥಾನವನ್ನು ಪಡೆದುಕೊಂಡಿದೆ ಎಂದರು.

ಸರ್ವೇ ಇಲಾಖೆಯ ಭೂಮಾಪಕರಾದ ರಾಜಮ್ಮ ನಾಮಪತ್ರ ಸಲ್ಲಿಸಿ ಮಾತನಾಡಿ, ಸರ್ಕಾರಿ ನೌಕರರು ತಮ್ಮ ಸೇವಾವಧಿಯಲ್ಲಿ ಸಾಕಷ್ಟು ಸವಾಲುಗಳು ಮತ್ತು ಸಮಸ್ಯೆಗಳನ್ನು ಎದುರಿಸುತಿದ್ದಾರೆ ಅವರ ಸಮಸ್ಯೆಗಳನ್ನು ನೀಗಿಸುವ ಸಲುವಾಗಿ ಹಾಗೂ ಸರ್ಕಾರದಿಂದ ನೌಕರರಿಗೆ ದೊರಬೇಕಾದ ಸವಲತ್ತುಗಳನ್ನು ಕೊಡಿಸಿಕೊಡಲು ಮತ್ತು ಹಿರಿಯ ಅಧಿಕಾರಿಗಳು ಮತ್ತು ನೌಕರರ ನಡುವೆ ಸೇತುವೆಯಾಗುವುದರೊಂದಿಗೆ ಅವರುಗಳ ಧ್ವನಿಯಾಗಿ ನೌಕರರ ಹಿತ ಮತ್ತು ಶ್ರೇಯಸ್ಸನ್ನು ಕಾಪಾಡುವ ಸದುದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನೌಕರರು ನನ್ನ ಬೆಂಬಲಿಸುತ್ತಾರೆಂಬ ಆಶಾಭಾವನೆ ವ್ಯಕ್ತಪಡಿಸಿದರು.

11 ನಾಮಪತ್ರ: ಇದೂವರೆಗೂ ತಾಲ್ಲೂಕು ಪದಾಧಿಕಾರಿಗಳ ಸ್ಥಾನಕ್ಕೆ ಕೆ.ಎನ್.ನಾಗೇಶ್, ಹೆಚ್.ರಾಮಾಂಜುನಪ್ಪ, ಎಸ್.ಎಂ.ರೇಣುಕಾಸ್ವಾಮಿ. ಎಂ.ಉಮಾಶಂಕರ್, ಎಲ್.ಗೋಪಿನಾಥ್, ಎಂಎಸ್. ರುದ್ರ ಮೂರ್ತಿ, ಆರ್.ಪುಷ್ಪಾವತಿ, ಎಂ.ಗುರುಮೂರ್ತಿ, ಎನ್.ಎಂ.ಶಂಕರ್, ಭೂಮಪಕರಾದ ರಾಜಮ್ಮ, ಎಂ.ಆರ್.ಮಲ್ಲಿಕಾರ್ಜುನ ಅವರುಗಳು ನಾಮಪತ್ರ ಸಲ್ಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು