LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸರ್ಕಾರಿ "ಶಾಲೆ" ಉಳಿಸಲು ಮೂವರು ಹುಡುಗರ ಸಾಹಸ ಲೀಲಾವತಿ ಸ್ಮಾರಕದ ಮುಂದೆ ಶಾಲೆಗೆ ಚಾಲನೆ

ಶ್ರೀ ಕನ್ನಡಾಂಬೆ ಮೂವೀಸ್ ಬ್ಯಾನರ್ ಅಡಿಯಲ್ಲಿ ಎಂ. ಬಿ . ಆರ್. (ಮಂಜುನಾಥ್ ಬಿ.ಆರ್.) ಅವರು ನಿರ್ದೇಶಿಸುತ್ತಿರುವ, ನಾಗು ಶ್ರೀ ಎಸ್.ಎನ್. ಅವರ ನಿರ್ಮಾಣದ ಚಿತ್ರ ಶಾಲೆ. ಮಕ್ಕಳ ಸಾಹಸದ ಕಥಾನಕ ಹೊಂದಿರುವ ಈ ಚಿತ್ರದ ಚಿತ್ರೀಕರಣದ ಪ್ರಾರಂಭೋತ್ಸವ ಡಾ||ಲೀಲಾವತಿ ಸ್ಮಾರಕ ಭವನದಲ್ಲಿ ನೆರವೇರಿತು. ಡಾ. ಲೀಲಾವತಿ ಅವರು ಸರ್ಕಾರಿ ಶಾಲೆಯ ಮಕ್ಕಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.ಅಂಥ ಮಹಾನ್ ಕಲಾವಿದೆಯ ಸ್ಮಾರಕದ ಮುಂದೆಯೇ ಶಾಲೆ ಚಿತ್ರ ಆರಂಭವಾಗಿದೆ.

ಈ ಚಿತ್ರದ ಮುಹೂರ್ತ ದೃಶ್ಯಕ್ಕೆ ನಟ ವಿನೋದ್ ರಾಜಕುಮಾರ್ ಅವರು ಕ್ಲಾಪ್ ಮಾಡಿ ಚಾಲನೆ ನೀಡಿದರು. ನಂತರ ಮಾತನಾಡಿದ ವಿನೋದ್ ರಾಜ್, ನಮ್ಮ ತಾಯಿಯ ಹಾಗೂ ಆ ಭಗವಂತನ ಆಶೀರ್ವಾದದಿಂದ ಶಾಲೆ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿಕೊಂಡು ಆದಷ್ಟು ಬೇಗನೆ ಜನರ ಮುಂದೆ ಬರಲಿ ಎಂದು ಶುಭ ಹಾರೈಸಿದರು.
ಇತ್ತೀಚಿನ ದಿನಗಳಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಅಳಿವಿನಂಚಿನಲ್ಲಿವೆ.

ಮೂವರು ಹುಡುಗರು ಅಂಥ ಸರ್ಕಾರಿ ಶಾಲೆಗಳನ್ನು ಮತ್ತೆ ತೆರೆಸುವ ನಿಟ್ಟಿನಲ್ಲಿ ನಡೆಸುವ ಪ್ರಯತ್ನ ಹಾಗೂ ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಲು ಪಣತೊಟ್ಟು ಹೋರಾಡುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಸರ್ಕಾರಿ ಶಾಲೆಯಲ್ಲಿ ಕಲಿಯದ ಹಲವಾರು ವಿಷಯಗಳ ಬಗ್ಗೆ ಈ ಸಿನಿಮಾ ಹೇಳಲಿದೆ. ಕೋಲಾರ, ಮಾಲೂರು, ಚಿಕ್ಕಮಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಮಂಜುನಾಥ್ ಬಿ ಆರ್. ಅವರು ಹೇಳಿದರು.

ಇನ್ನು ಈ ಚಿತ್ರದ ತಾರಾಗಣದಲ್ಲಿ ಹಿರಿಯ ನಟರಾದ ರಮೇಶ್ ಭಟ್, ಶಂಕರ್ ಅಶ್ವಥ್, ಮೀಸೆ ಅಂಜನಪ್ಪ, ಬಲರಾಮ್ ಪಾಂಚಲ್ ಸೇರಿದಂತೆ ಹಲವಾರು ಕಲಾವಿದರ ಜೊತೆಗೆ ಬಾಲ ಕಲಾವಿದರಾದ ಅಕ್ಷಿತ್, ಪಲ್ಲವಿ, ಯೋಗೀಶ್, ಜೀವಾ ಕೂಡ ನಟಿಸುತ್ತಿದ್ದಾರೆ. ಅಲ್ಲದೆ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಸದ್ಯದಲ್ಲೇ ತಾಂತ್ರಿಕ ಬಳಗದ ಮಾಹಿತಿ ನೀಡಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು