LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸರ್ಕಾರ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆ ಭಾಗ್ಯವನ್ನೂ ಕರುಣಿಸಿದೆ: ವಿಜಯೇಂದ್ರ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆಯಂತ ಗಂಭೀರ ಆರೋಪಗಳನ್ನು ಮಾಡಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಮಂತ್ರಿಗಳು ತಮ್ಮ ಬಲಗೈ ಬಂಟರು ಹಾಗೂ ಆಪ್ತ ಸಹಾಯಕರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೀಡಿದಂತಿದೆ. ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ, ಇದರ ಬೆನ್ನಲ್ಲೇ ವಿಧಾನ ಮಂಡಲದ ಸುವರ್ಣ ಸೌಧಕ್ಕೆ ನುಗ್ಗಿ ಶಾಸಕರಾದ ಸಿಟಿ ರವಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಹಸಿಯಾಗಿರುವಾಗಲೇ ಇಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್ ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ. ಪ್ರತಿಯೊಂದು ವಿಷಯದಲ್ಲೂ ಅನಗತ್ಯ ಮೂಗು ತೂರಿಸಿ ತಮ್ಮ ನಡೆ, ನುಡಿಗಳಲ್ಲಿ ದಾಷ್ಟ್ಯತನ ಪ್ರದರ್ಶಿಸುವ ಸಚಿವ ಪ್ರಿಯಾಂಕ್ ಖರ್ಗೆ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂಬುದು ಆತ್ಮಹತ್ಯೆಗೊಳಗಾದ ದುರ್ದೈವಿ ಗುತ್ತಿಗೆದಾರ ಸಚಿನ್ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಲಿ ಎಂದು ಆಗ್ರಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು