LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸರ್ಕಾರ ಬುಡಮೇಲು ಯತ್ನ ಕೇಂದ್ರ ಸರ್ಕಾರದ ವಿರುದ್ಧ `ಕೈ' ಸಚಿವರ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ನಾಲ್ವರು ಕಾಂಗ್ರೆಸ್ ಸಚಿವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಸಚಿವರಾದ, ಕೃಷ್ಣಬೈರೇಗೌಡ, ದಿನೇಶ್‍ಗುಂಡೂರಾವ್, ಸಂತೋಷ್‍ಲಾಡ್, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್ ಮತ್ತಿತರರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.ಕೇಂದ್ರ ಸರ್ಕಾರ ಐಟಿ, ಇಡಿ, ಸಿಬಿಐ ನಂತರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.

ಕರ್ನಾಟಕ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ ನಡೆದಿದೆ ಎಂದಿರುವ ಅವರು, ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಬಂಧಿತರನ್ನು ಬಲವಂತವಾಗಿ ಕೆಲವರ ಹೆಸರನ್ನು ಹೇಳುವಂತೆ ಒತ್ತಾಯಿಸಲಾಗುತ್ತಿದೆ. ಸರ್ಕಾರದ ಪ್ರಮುಖರ ಹೆಸರನ್ನು ಹೇಳುವಂತೆ ಬಲವಂತ ಮಾಡಲಾಗುತ್ತಿದೆ ಎಂದು ಆರೋಪಿಸಿ, ಇಲ್ಲವಾದಲ್ಲಿ ಇಡಿ ಪವರ್ ಏನೆಂದು ತೋರಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದ್ದ ಪ್ರತಿಪಕ್ಷಗಳು ಟಾರ್ಗೆಟ್ ಮಾಡಲಾಗಿದೆ. ವಿಪಕ್ಷಗಳ ಮೇಲೆ ದಾಳಿ ನಡೆಯುತ್ತಿದ್ದು, ಇದುವರೆಗೂ ವಿಪಕ್ಷಗಳವರ ಮೇಲೆ ಶೇ. 95ರಷ್ಟು ದಾಳಿ ನಡೆದಿದ್ದರೆ ಕೇವಲ ಶೇ. 5ರಷ್ಟು ಮಾತ್ರ ಆಡಳಿತ ಪಕ್ಷದವರ ಮೇಲೆದಾಳಿ ಮಾಡಲಾಗಿದೆ. ರಾಜ್ಯದಲ್ಲಿ ನಡೆದಿರುವ ದೇವರಾಜು ಅರಸು ಟ್ರಕ್ ಟರ್ಮಿನಲ್, ಬೋವಿ ತಾಂಡ ಅಭಿವೃದ್ಧಿ ನಿಗಮದ ಹಗರಣಗಳು ಅಪರಾಧವಲ್ಲವೇ? ಅವುಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ. ಕೇವಲ ವಿಪಕ್ಷಗಳು ಮಾತ್ರ ಗುರುತಿಯಾಗಿಸಿ ದಾಳಿ ಮಾಡಲಾಗುತ್ತಿದೆ ಎಂದು ಇವರು ಆರೋಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು