LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸರ್ಜರಿ ಸಕ್ಸಸ್: ಆಸ್ಪತ್ರೆಯಿಂದ ಶಿವಣ್ಣ ಡಿಸ್ಚಾರ್ಜ್‌

ವಾಷಿಂಗ್ಟನ್: ಇತ್ತೀಚೆಗಷ್ಟೇ ಕ್ಯಾನ್ಸರ್ ಸರ್ಜರಿಗೆ ಒಳಗಾಗಿದ್ದ ಖ್ಯಾತ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಲ್ಲಿ ಕ್ಯಾನ್ಸರ್‌ ಚಿಕಿತ್ಸೆಗೆ ಒಳಗಾಗಿದ್ದು, ಇತ್ತೀಚೆಗೆ ಸರ್ಜರಿ ಕೂಡ ಸಕ್ಸಸ್‌ ಆಗಿತ್ತು. ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದ ಶಿವಣ್ಣ ನಾನು ಆರೋಗ್ಯವಾಗಿದ್ದೇನೆ. ಆದಷ್ಟು ಬೇಗ ನಿಮ್ಮ ಮುಂದೆ ಬರುತ್ತೇನೆ ಎಂದಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, ಶೀಘ್ರದಲ್ಲೇ ಬೆಂಗಳೂರಿಗೆ ಅಗಮಿಸಲಿದ್ದಾರೆ ಎನ್ನಲಾಗಿದೆ.

ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್‌ಟಿಟ್ಯೂಟ್‌ನಲ್ಲಿ ಶಿವಣ್ಣ ಅವರಿಗೆ ಇತ್ತೀಚೆಗೆ ಸರ್ಜರಿ ನಡೆದಿತ್ತು. ಬಳಿಕ ಅವರಿಗೆ ಎರಡು ಬಾರಿ ಮೆಡಿಕಲ್‌ ಚೆಕಪ್‌ ಆಗಿತ್ತು. ಇದೀಗ ಈ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶಿವಣ್ಣ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ಈ ತಿಂಗಳ ಕೊನೆಯ ವಾರದವರೆಗೂ ಶಿವಣ್ಣ ಅಮೇರಿಕಾದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 24ರ ಬಳಿಕ ಅವರು ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು