LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸವದತ್ತಿಗೆ ಬರುವ ಭಕ್ತಾದಿಗಳ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ

ಬೆಳಗಾವಿ:  ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರವಾಸೋದ್ಯಮ ಮಂಡಳಿ ಹಾಗೂ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರಕ್ಕೆ ಸುಮಾರು ಎರಡು ಕೋಟಿ ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಕುಡಿಯುವನೀರು, ಶೌಚಾಲಯ, ಪಾರ್ಕಿಂಗ್, ತಂಗುದಾಣದ ವ್ಯವಸ್ಥೆಯನ್ನು ಪೂರೈಸಬೇಕಾಗಿದೆ.

ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಈ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಕ್ಷೇತ್ರದಲ್ಲಿ1087ಎಕರೆ ಪ್ರದೇಶ ಲಭ್ಯವಿದ್ದು, ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಈ ಪ್ರದೇಶವನ್ನು ಬಳಸಿಕೊಳ್ಳಲಾಗುವುದು. ಮನುಷ್ಯರಿಗೆ ದಾಸೋಹ ವ್ಯವಸ್ಥೆಯಿರುವಂತೆ ರಾಸುಗಳಿಗೂ ಮೇವು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು.ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾಗಿದ್ದ ತೆರಿಗೆ ಪಾಲು ನೀಡದೇ, ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ.

ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿರುವ ನಮಗೆಅನ್ಯಾಯವಾಗಬಾರದು. ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲನ್ನು ಕೇಂದ್ರ ನೀಡಿದರೆ, ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವಅನ್ಯಾಯದ ವಿರುದ್ಧ ಧ್ವನಿ ಎತ್ತದ ಬಿಜೆಪಿಯವರು , ಕೇವಲ ಕೋಮುವಾದಿ ಕ್ಷುಲ್ಲಕ ವಿಚಾರಗಳಿಗೆ ಪ್ರತಿಭಟನೆ ಮಾಡುತ್ತಾರೆ ಎಂದರು.

ಬೆಳಗಾವಿ ಅಧಿವೇಶನದ ವೇಳೆಗೆ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ವಿಜಯೇಂದ್ರ ರವರ ತಂದೆ ಯಡಿಯೂರಪ್ಪನವರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಮ್ಮ ಮೇಲೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆ ಇದೆ ? ಕಾಂಗ್ರೆಸ್ ಸರ್ಕಾರಕ್ಕೆ ಜನ ನೀಡುತ್ತಿರುವ ಬೆಂಬಲವನ್ನು ಸಹಿಸಲಾಗದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು