LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಸಿಗಳನ್ನು ನೆಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡ ಕನ್ನಮಂಗಲ ಎಂ.ಪಿ.ಸಿ.ಎಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್

ದೇವನಹಳ್ಳಿ: ಮಾಜಿ. ಜಿ.ಪಂ. ಸದಸ್ಯ, ಕನ್ನಮಂಗಲ ಎಂ.ಪಿ.ಸಿ.ಎಸ್ ಅಧ್ಯಕ್ಷರಾಗಿರುವ ಕೆ.ಸಿ. ಮಂಜುನಾಥ್‍ರವರು ತಮ್ಮ ಹುಟ್ಟು ಹಬ್ಬದಂದು ಸಸಿಗಳನ್ನು ನೆಟ್ಟು ನೀರು ಹಾಕುವ ಮುಖಾಂತರ ಸರಳವಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡರು.

ಈ ಸಮಯದಲ್ಲಿ ಕನ್ನಮಂಗಲ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೆ.ಆರ್. ನಾಗೇಶ್ ಮಾತನಾಡಿ ಅನೇಕಜನ ತಮ್ಮ ಹುಟ್ಟಿದ ಹಬ್ಬಗಳನ್ನು ಅದ್ದೂರಿಯಾಗಿ ಮಾಡಿ ಮೋಜು ಮಸ್ತಿ ಮಾಡುತ್ತಿರುತ್ತಾರೆ ಆದರೆ ಕೆ.ಸಿ.ಮಂಜಣ್ಣನವರು ಗಿಡಗಳನ್ನು ನೆಡುವ ಮುಖಾಂತರ ತಮ್ಮ ಹುಟ್ಟು
ಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ, ಅವರ ಪರಿಸರಪ್ರೇಮವನ್ನು ಪ್ರತಿಯೊಬ್ಬರೂ ಮೆಚ್ಚಿ ಅದರಂತೆ ನಡೆಯಬೇಕು ಎಂದರು.

ಕೆ.ಸಿ. ಮಂಜುನಾಥ್ ಮಾತನಾಡಿ ಇಂದಿನ ಯುವಕರು ಹುಟ್ಟುಹಬ್ಬವನ್ನು ದುಂದು ವೆಚ್ಚ ಮಾಡಿ ಆಚರಿಸಿಕೊಳ್ಳದೇ ಸಮಾಜಕ್ಕೆ ಒಳಿತಾಗುವ ಹಣ್ಣಿನ ಹಾಗೂ ಉಪಯುಕ್ತ ಗಿಡಗಳನ್ನು ನೆಟ್ಟರೆ ಮುಂದೊಂದು ದಿನ ಮರವಾಗಿ ನಮಗೆ ನೆರಳು ನೀಡುವುದಲ್ಲದೆ ಪರಿಸರದ ಉಳಿವಿಗೆ ಹಾಗೂ ಪಕ್ಷಿ ಸಂಕುಲಕ್ಕೆ ಆಶ್ರಯತಾಣವಾಗಲಿದೆ, ಪರಿಸರವನ್ನು ಉಳಿಸುವಲ್ಲಿ ತಮ್ಮ ಸ್ವಲ್ಪ ಸಮಯವನ್ನು ಮೀಸಲಿಡಿ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕೆ.ಸಿ.ಮಂಜುನಾಥ್‍ರವರ ಆಪ್ತರು, ಬಂಧುಗಳು, ಸ್ನೇಹಿತರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಆಗಮಿಸಿ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕೆ.ಆರ್. ನಾಗೇಶ್, ಹಿತ್ತರಹಳ್ಳಿ ರಮೇಶ್, ಸುನಿಲ್ ಸೇರಿದಂತೆ ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು