LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಹನೆ ಕಳೆದುಕೊಂಡ ಭೂಸ್ವಾಧೀನ ವಿರೋಧಿ ರೈತರು-1028 ದಿನಗಳ ಹೋರಾಟ ವಿಧಾನಸೌಧ ಚಲೋ - ಅನಿರ್ದಿಷ್ಟಾವಧಿ ಧರಣಿ

ದೇವನಹಳ್ಳಿ : ರಾಜ್ಯ ಸರ್ಕಾರದ ಮಂತ್ರಿಗಳಿಗೆ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಅಹವು ಬಾರಿ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಗಳು ಸರ್ಕಾರ ರೈತಪರವಾಗಿದೆ ಎಂದು ಹೇಳುತ್ತಲೇ ಬಂದಿದ್ದು ಶೀಘ್ರ ಇತ್ಯರ್ಥಪಡಿಸುತ್ತೇವೆ ಎಂದು ತಿಳಿಸಿದ್ದರೂ ಕೆಐಎಡಿಬಿ ಅಧಿಕಾರಿಗಳು ಪದೇಪದೇ ರೈತರಿಗೆ ತೊಂದರೆ ನೀಡುತ್ತಿದ್ಧಾರೆ, ಅವರಿಗೆ ತಕ್ಕ ಪಾಠಕಲಿಸಬೇಕಿದೆ ಎಂದು ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯ ಪರವಾಗಿ ಕಾರಹಳ್ಳಿ ಶ್ರೀನಿವಾಸ್ ಅಧಿಕಾರಿಗಳ ನಡೆ ಬಗ್ಗೆ ಖಂಡನೆ ವ್ಯಕ್ತಪಡಿಸಿದರು.

ಅವರು ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಚನ್ನರಾಯಪಟ್ಟಣ ರೈತರ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಗೆ ಬೆಂಬಲ ವ್ಯಕ್ತಪಡಿಸಿ, ಮಾತನಾಡಿ ಸರ್ಕಾರದ ಹಲವು ಸಚಿವರು ರೈತರ ಪರವಾಗಿ ಮಾತನಾಡಿದ್ದರೂ ಭ್ರಷ್ಠ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದ್ದಾರೆ, 1028ದಿನ ಕಳೆದರೂ ಯಾವುದೇ ತೀರ್ಮಾನ ನೀಡದಿರುವುದರಿಂದ ಇದೇ ತಿಂಗಳ 10ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೆಳಿಗ್ಗೆ 11ರಿಂದ ಹಲವಾರು ರೈತಪರ, ಕನ್ನಡಪರ, ದಲಿತಪರ ಸಂಘಟನೆಗಳೊಂದಿಗೆ ಸೇರಿ ವಿಧಾನಸೌಧ ಚಲೋ ಹಾಗೂ ಅನಿರ್ಧಿಷ್ಠಾವಧಿ ಧರಣಿ ಮಾಡಲಿದ್ದೇವೆ ಎಂದು ತಿಳಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಕಾಮ್ರೆಡ್ ಬಸವರಾಜ್ ಮಾತನಾಡಿ ಫೆ|| 10ರಿಂದ ಭೃಹತ್ ಪ್ರತಿಭಟನೆ, ಧರಣಿ, ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣ ಹೋಬಳಿಯ 1777 ಎಕರೆ ಬಲವಂತದ ಭೂಸ್ವಾದೀನ ಕೈಬಿಡಬೇಕು ಎಂದು ಒತ್ತಾಯ ಮಾಡಲಿದ್ದೇವೆ, ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಂತ 10ಸಾವಿರಕ್ಕೂ ಹೆಚ್ಚು ರೈತರು ಸೇರುವ ನಿರೀಕ್ಷೆಯಿದ್ದು ರಾಜ್ಯ ಮಟ್ಟದ ಭೂಸ್ವಾಧೀನ ವಿರೋಧಿ ಹೋರಾಟದ ರೈತರ ಸಭೆ ನಡೆಸಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರನ್ನು ಅವಮಾನಿಸಿದ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಈ ಕೂಡಲೇ ರಾಜಿನಾಮೆ ನೀಡಿ ರಾಜ್ಯ ಸರ್ಕಾರ ಭೂಸ್ವಾಧೀನವನ್ನು ಕೈಬಿಡಬೇಕು ಇಲ್ಲವಾದಲ್ಲಿ ಹಸಿರು ಸೇನೆ, ಕನ್ನಡಪರ ಸಂಘಟನೆ ಇನ್ನೂ ಹಲವಾರು ಸಂಘಟನೆಗಳು ಬೆಂಬಲದೊಂದಿಗೆ ಸುಮಾರು ರೈತ ಮಹಿಳೆಯರು ಸೇರಿದಂತೆ 5 ಸಾವಿರ ಹೋರಾಟಗಾರರು ಚನ್ನರಾಯಪಟ್ಟಣ ರೈತರಿಗೆ ಬೆಂಬಲಿಸಿ ಶಾಂತಿಯುತವಾಗಿ ನ್ಯಾಯಕ್ಕಾಗಿ ಹೋರಾಟ ಮಾಡಲಿದ್ದೇವೆ, ಭೂ ಸ್ವಾಧೀನ ಇದೇ ರೀತಿ ಮುಂದೆವರೆದರೆ ಮುಂದಿನ 20 ವರ್ಷಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಕೃಷಿ ಭೂಮಿ ಉಳಿಯುವುದಿಲ್ಲ ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿ ಹಸಿವಿನಿಂದ ಸಾಯುವ ಪರಿಸ್ಥಿತಿ ಬರುತ್ತದೆ ಎಂದು ನಮ್ಮ ಭೂಮಿ ನಮ್ಮ ಹಕ್ಕು ಎಂದು ಅಗ್ರಹಿಸಿದರು.

ಚನ್ನರಾಯಪಟ್ಟಣ ಗ್ರಾಪಂ ಮಾಜಿ ಅಧ್ಯಕ್ಷ ಮಾರೇಗೌಡ, ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಮುಖಂಡ ನಲ್ಲಪ್ಪನಹಳ್ಳಿ ನಂಜಪ್ಪ, ದಸಂಸ ಮುಖಂಡ ಕಾರಹಳ್ಳಿ ಶ್ರೀನಿವಾಸ್, ಸಹ ಸಂಚಾಲಕರಾದ ಪ್ರಭಾ ಬೆಳವಂಗಲ, ರಾಮಕೃಷ್ಣ, ಪ್ರವೀಣ್‍ಕುಮಾರ್, ರಾಮೇಗೌಡ ರೈತ ಹೋರಾಟ ಮುಖಂಡರಾದ ತಿಮ್ಮರಾಯಪ್ಪ, ಪ್ರಮೋದ್, ರಮೇಶ್, ಬಚ್ಚೇಗೌಡ, ಮಂಜುನಾಥ್, ವೆಂಕಟೇಶ್ ಬಿದಲೂರು ರಮೇಶ್, ಅಶ್ವಥಪ್ಪ, ವೆಂಕಟರಮಣಪ್ಪ ಸೇರಿದಂತೆ ಹಲವಾರು ರೈತ ಹೋರಾಟಗಾರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು