LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

`ಸಾಂಸ್ಕೃತಿಕ ಚಟುವಟಿಕೆ ಮನುಷ್ಯನ ಕ್ರಿಯಾಶೀಲತೆ ಹೆಚ್ಚಿಸುತ್ತದೆ'

ಬೊಮ್ಮನಹಳ್ಳಿ: ಸಾಂಸ್ಕೃತಿಕ ಹಾಗೂ ಕಲಾ ಚಟುವಟಿಕೆಗಳು ಮನುಷ್ಯನ ಕ್ರಿಯಾ ಶೀಲತೆಯನ್ನು ಹೆಚ್ಚಿಸುತ್ತದೆ ಎಂಬುದಾಗಿ ಶಾಸಕ ಎಂ.ಸತೀಶ್ ರೆಡ್ಡಿ ತಿಳಿಸಿದರು.ಅವರು ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಅರಕೆರೆ ವಾರ್ಡಿನ ಬನ್ನೇರುಘಟ್ಟ ರಸ್ತೆಯ ಎಸ್ಟೀಮ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಕಲಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರಲ್ಲಿಯೂ ಒಂದಲ್ಲ ಒಂದು ರೀತಿಯಲ್ಲಿ ಕಲಾ ಪ್ರತಿಭೆಯು ಅಡಗಿರುತ್ತದೆ ಅದನ್ನು ಹೊರಹಾಕಲು ಒಂದು ಸೂಕ್ತವಾದ ವೇದಿಕೆ ಬೇಕಾಗುತ್ತದೆ ಅದಕ್ಕಾಗಿ ಇಂತಹ ಸಾಂಸ್ಕೃತಿಕ ಕಲಾ ಪ್ರದರ್ಶನ ಕಾರ್ಯಕ್ರಮಗಳು ಅವಶ್ಯಕವಾಗಿವೆ ಎಂದರು.ಇದೇ ಸಂದರ್ಭದಲ್ಲಿ ಅರಕೆರೆ ವಾರ್ಡಿನ ಬಿಬಿಎಂಪಿಸದಸ್ಯೆ ಸದಸ್ಯೆ ಭಾಗ್ಯಲಕ್ಷ್ಮೀಮುರಳಿ ಮಾತನಾಡುತ್ತ ಕಲೆ ಹಾಗೂ ಕಲಾವಿದರನ್ನು  ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಕಲಾಅಭಿರುಚಿ ಇರುವ ವ್ಯಕ್ತಿಗಳು ಜೀವ ಉತ್ಸಾಹಿಗಳಾಗಿರುತ್ತಾರೆ,ಆದುದ್ದರಿಂದ ಇಂತಹ ಕಾರ್ಯಕ್ರಮಕ್ಕೆ ಎಸ್ಟೀಮ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ಮುಂದಾಗಿರುವುದು ಸಂತೋಷ ಮತ್ತು ಹೆಮ್ಮೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಂಗೀತ, ನೃತ್ಯ, ನಾಟಕ, ಗಾಯನ, ಭಾಷಣ,ಇತ್ಯಾದಿಗಳ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ 250 ಕ್ಕೂ ಹೆಚ್ಚು ವ್ಯಕ್ತಿಗಳು ಭಾಗವಹಿಸಿ ಕಲಾ ಪ್ರದರ್ಶನ ನೀಡಿದರು. ಉತ್ತಮವಾಗಿ ಕಲಾ ಪ್ರದರ್ಶನ ನೀಡಿದ ವ್ಯಕ್ತಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಬಿಬಿಎಂಪಿಸದಸ್ಯೆ ಭಾಗ್ಯಲಕ್ಷ್ಮೀಮರಳಿ, ಅರಕೆರೆ ವಾರ್ಡ್ ಬಿಜೆಪಿ ಮುಖಂಡರಾದ ಮುರಳಿ, ಮಾಜಿ ಬಿಬಿಎಂಪಿಸದಸ್ಯ ಪುರುಷೋತ್ತಮ, ಅಧ್ಯಕ್ಷ ಚಂದ್ರಶೇಖರ್, ಪದಾಧಿಕಾರಿಗಳಾದ ವೈಷ್ಣವಿ, ಲೀನಾ ಆಚಾರ್ಯ, ಸುಪ್ರಭ, ನಂದಿನಿ, ಸೌಮೀತಾ, ಶೀತಲ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು