LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಸಾಗುವಳಿ ಚೀಟಿ, ಪಹಣಿ, ಪೋಡಿ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆಯಲ್ಲಿ ಚಾಮರಾಜನಗರ ಜಿಲ್ಲೆ ಉತ್ತಮ ಹೆಜ್ಜೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಚಾಮರಾಜನಗರ: ನೂತನ ತಂತ್ರಜ್ಞಾನದಡಿ ಸಾಗುವಳಿ ಚೀಟಿ, ಪಹಣಿ ಪತ್ರ, ಪೋಡಿ ದಾಖಲೆ ಡಿಜಿಟಲೀಕರಣಗೊಳಿಸಿ ರೈತರಿಗೆ ವಿತರಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನದಲ್ಲಿ ಚಾಮರಾಜನಗರ ಜಿಲ್ಲೆ ಉತ್ತಮ ಹೆಜ್ಜೆ ಇಟ್ಟಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಗುಂಡ್ಲುಪೇಟೆಯ ಶಿಕ್ಷಕರ ಭವನದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಗರ್ ಹುಕುಂ ಸಾಗುವಳಿ ಚೀಟಿ, ಪಹಣಿ ಪತ್ರಿಕೆ, ಪೋಡಿ ದಾಖಲೆ ಹಾಗೂ ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಈಗಾಗಲೇ ಡಿಜಿಟಲೀಕರಣಗೊಳಿಸಿರುವ ಸಾಗುವಳಿ ಚೀಟಿ, ಹಾಗೂ ಇತರೆ ದಾಖಲೆಗಳನ್ನು ರೈತರಿಗೆ ವಿತರಿಸಿ ಅವರು ಮಾತನಾಡಿದರು.

ಉಳುವವನೇ ಭೂಮಿ ಒಡೆಯ, ಭೂ ಸುಧಾರಣೆ ಯೋಜನೆ ಸೇರಿದಂತೆ ಹಲವು ವಿಷಯಗಳಡಿ 30-40 ವರ್ಷಗಳ ಹಿಂದೆ ಹಲವರಿಗೆ ಭೂಮಿ ಮಂಜೂರಾಗಿದೆ. ಇಂತಹ ಜಮೀನುಗಳು ಇದುವರೆಗೂ ದುರಸ್ತಿಯಾಗಿಲ್ಲ. ರೈತರು ಸಾಗುವಳಿ ಮಾಡುತ್ತಿದ್ದರೂ ಜಮೀನು ಸರ್ಕಾರಿ ಹೆಸರಿನಲ್ಲಿರುತ್ತದೆ. ಜಮೀನಿನ ಮೇಲೆ ಸಂಪೂರ್ಣ ಹಕ್ಕು, ಮಾಲೀಕತ್ವ ರೈತರಿಗೆ ಇಲ್ಲವಾಗಿದೆ. ಜಮೀನು ದುರಸ್ತಿಯಾಗದಿದ್ದರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕಾನೂನುಬದ್ಧವಾಗಿ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ದುರಸ್ತಿ ಸಂಬಂಧ ರೈತರು ಅವಶ್ಯ ದಾಖಲೆಗಳನ್ನು ಒದಗಿಸುವುದು ಸಾಧ್ಯವಾಗದಿರಬಹುದು. ಇದನ್ನು ಮನಗಂಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ಸಾಗುವಳಿ ಚೀಟಿ, ಪಹಣಿ ಪತ್ರಿಕೆ, ಪೋಡಿ ದಾಖಲೆ ಹಾಗೂ ಕಂದಾಯ ಗ್ರಾಮಗಳ ಹಕ್ಕುಪತ್ರಗಳನ್ನು ನೂತನ ತಂತ್ರಜ್ಞಾನದಡಿ ಡಿಜಿಟಲೀಕರಣಗೊಳಿಸಿ ರೈತರಿಗೆ ವಿತರಿಸುವ ಮಹತ್ತರ ಕಾರ್ಯವನ್ನು ರಾಜ್ಯಾದ್ಯಂತ ಆರಂಭಿಸಿದೆ. ಎಲ್ಲಾ ಕಾನೂನುಗಳನ್ನು ಸುಲಭೀಕರಣಗೊಳಿಸಿ ಒಂದೇ ಸುತ್ತೋಲೆಯಲ್ಲಿ ಅಳವಡಿಸಲಾಗಿದೆ. ಇಂತಹ ಜನಪರ ಕೆಲಸಗಳಿಂದ ಜನರಿಗೆ ಸರ್ಕಾರದ ಬಗ್ಗೆ ಉತ್ತಮ ಅಭಿಪ್ರಾಯ ಮೂಡಲಿದೆ ಎಂದರು.

ಹಿಂದೆ ಸಾಗುವಳಿ ಮಾಡದಿರುವವರು, ಇತರರು ಬಗರ್‍ಹುಕುಂ ಅಡಿಯಲ್ಲಿ ಜಮೀನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿರುವುದು ಕಂಡುಬಂದಿದೆ. ಇದಕ್ಕಾಗಿ ಸರ್ಕಾರ ನೂತನ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಈಗ ಇದಕ್ಕೆಲ್ಲಾ ಅವಕಾಶವಿಲ್ಲದಂತಾಗಿದೆ. ಎಲ್ಲವೂ ಅನ್‍ಲೈನ್‍ನಲ್ಲಿ ನಮೂದಾಗುವುದರಿಂದ ದಾಖಲೆಗಳು ಕಳೆದುಹೋಗುವ ಸಂಭವವಿರದೇ ಶಾಶ್ವತವಾಗಿ ಸಾಕಷ್ಟು ವರ್ಷಗಳವರೆಗೆ ಇರಲಿದೆ. ಅಲ್ಲದೆ ಯಾವುದೇ ನಕಲಿ ದಾಖಲೆಗೆ, ಪೋರ್ಜರಿಗೆ, ತಿದ್ದುಪಡಿಗೆ ಅವಕಾಶವಿಲ್ಲದಂತಾಗಿದೆ. ಇದರಿಂದ ರೈತರು ನೆಮ್ಮದಿ ಜೀವನ ನಡೆಸುವಂತಾಗಲಿದೆ ಎಂದು ಸಚಿವರು ಹೇಳಿದರು.

ಪ್ರಸ್ತುತ ಬಗರ್‍ಹುಕುಂ ಅಡಿ ಜಮೀನು ಸಕ್ರಮಗೊಳಿಸಲು ರಾಜ್ಯಾದ್ಯಂತ 1 ಲಕ್ಷದ 58 ಸಾವಿರ ಅರ್ಜಿಗಳು ಬಂದಿವೆ. ಸಕ್ರಮಿಕರಣಗೊಳಿಸಲು ಯಾರು ಅರ್ಜಿ ಹಾಕಿದ್ದಾರೋ ಅವರಿಗೆ ಅವಶ್ಯ ದಾಖಲೆಗಳನ್ನು ಪಡೆದು ಪರಿಶೀಲಿಸಿ ಅರ್ಹರಿಗೆ ನಿಯಾಮಾನುಸಾರ ಮಂಜೂರು ಮಾಡಲಾಗುತ್ತದೆ. ಕೆಲವೆಡೆ ಗ್ರಾಮ, ತಾಂಡಾ, ಕ್ಯಾಂಪ್‍ಗಳಿದ್ದು, 50-100 ವರ್ಷಗಳಿಂದ ಕಂದಾಯ ಗ್ರಾಮಗಳಾಗಿ ಘೋಷಣೆಯಾಗಿರುವುದಿಲ್ಲ. ಇದರಿಂದ ಜನವಸತಿ ಸೌಲಭ್ಯಗಳನ್ನು ಒದಗಿಸಲು ತೊಂದರೆಯಾಗುತ್ತಿದೆ. ಇದನ್ನು ಪರಿಹರಿಸಲು ಸರ್ಕಾರ ಮುಂದಾಗಿದ್ದು, ಜಮೀನಿನ ನಕ್ಷೆ, ಆಕಾರ್ ಬಂದ್, ಹೊಸ ಸರ್ವೇ ನಂಬರ್ ಹಾಗೂ ಪ್ರತ್ಯೇಕ ಆರ್.ಟಿ.ಸಿ ಯೊಂದಿಗೆ ಸಾಗುವಳಿ ಚೀಟಿಯನ್ನು ಸರ್ಕಾರದ ವತಿಯಿಂದಲೇ ನೊಂದಣಿ ಮಾಡಿಸಿ ಡಿಜಿಟಲೀಕರಣಗೊಳಿಸಿ ರೈತರಿಗೆ ವಿತರಿಸಲಾಗುತ್ತಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ 68 ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದ್ದು, ಡಿಜಿಟಲೀಕರಣಗೊಂಡಿರುವ ಕಂದಾಯ ಗ್ರಾಮಗಳ 10 ಹಕ್ಕುಪತ್ರಗಳನ್ನು ಸಾಂಕೇತಿಕವಾಗಿ ಇಂದು ವಿತರಿಸಲಾಗುತ್ತಿದೆ. ಮುಂದಿನ 4 ತಿಂಗಳೊಳಗೆ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಅರ್ಹ ರೈತರೆಲ್ಲರಿಗೂ ಸಾಗುವಳಿ ಚೀಟಿ ವಿತರಿಸುವ ಕಾರ್ಯ ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಡಿಜಿಟಲೀಕರಣ ಪ್ರಕ್ರಿಯೆಯ ಯಶಸ್ವಿಗೆ ಗುಂಡ್ಲುಪೇಟೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ತಹಶೀಲ್ದಾರ್ ರಮೇಶ್ ಬಾಬು ಅವರ ಸತತ ಪರಿಶ್ರಮದಿಂದ ಇಂದು ಸಾಗುವಳಿ, ಪಹಣಿ, ಪೋಡಿ ದಾಖಲೆಗಳ ವಿತರಣೆ ಗುಂಡ್ಲುಪೇಟೆಯಲ್ಲಿ ಸಾಧ್ಯವಾಗಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ಹಿಂದೆ ತಮ್ಮ ತಂದೆ ಬಿ. ರಾಚಯ್ಯ ಅವರು ಸಚಿವರಾಗಿದ್ದ ಅವಧಿಯಲ್ಲಿ ಬಡವರಿಗೆ ಅರಣ್ಯ ಜಾಗವನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿ ಸಾಗುವಳಿ ಚೀಟಿ ನೀಡಿದ್ದರು. ಅವು ಇನ್ನೂ ದುರಸ್ತಿಯಾಗಿಲ್ಲ. ಕಾನೂನಿನಡಿ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಪ್ರತಿಕ್ರಿಯಿಸಿದ ಸಚಿ ವರು ಈ ಪ್ರಕರಣದಲ್ಲಿ ಮರುಸಮೀಕ್ಷೆ ನಡೆದಿದ್ದು, ಅರಣ್ಯ ಇಲಾಖೆಯೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು ಎಂದರು.

ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಗುವಳಿ ಚೀಟಿ ಸಮಸ್ಯೆ ಪ್ರತಿ ಸಭೆಯಲ್ಲಿಯೂ ಪ್ರತಿಧ್ವನಿಸುತ್ತಿದೆ. ಕಾನೂನುಗಳು ಬಿಗಿಯಾಗಿರುವುದರಿಂದ ಅರಣ್ಯಭೂಮಿಗೆ ಸಾಗುವಳಿ ಚೀಟಿ ನೀಡುವುದು ಕಷ್ಟಸಾಧ್ಯವಾಗಿದೆ. ಅರಣ್ಯ ಇಲಾಖೆ ನಮ್ಮ ಭೂಮಿ ಕಿತ್ತುಕೊಳ್ಳಲಿದೆ ಎಂಬ ಭಯ ಜನರಲ್ಲಿದೆ. ಇದನ್ನು ಹೋಗಲಾಡಿಸಲು ಶಾಶ್ವತ ಪರಿಹಾರ ಕಂಡುಹಿಡಿಯಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ 5 ತಾಲೂಕುಗಳು, 16 ಹೋಬಳಿಗಳಿವೆ. 6,60,696 ಭೂ ಮಾಲೀಕರಿದ್ದಾರೆ. 4,11,580 ಆರ್.ಟಿ.ಸಿ ಗಳಿವೆ. 5,75,745 ಆರ್.ಟಿ.ಸಿ ಗಳು ಆಶಧಾರ್ ಸೀಡಿಂಗ್ ಆಗಿದ್ದು, ಶೇ. 82.81ರಷ್ಟು ಪ್ರಗತಿ ಸಾಧಿಸಲಾಗಿದೆ. 4 ಬಗರ್‍ಹುಕುಂ ಸಮಿತಿ ರಚನೆಯಾಗಿವೆ. 3239 ದರಖಾಸ್ತು ಭೂಮಿ ಪೋಡಿಯಾಗಿದ್ದು,

ಮೂರು ತಿಂಗಳೊಳಗೆ ಸಾಗುವಳಿ ಪತ್ರ ವಿತರಿಸಲಾಗುವುದು. ಭೂ ಸುರಕ್ಷಾ ಯೋಜನೆಯಡಿ ಎಲ್ಲಾ ದಾಖಲಾತಿಗಳು ಡಿಜಿಟಲೀಕರಣಗೊಂಡಿದ್ದು, ಯಳಂದೂರು ತಾಲೂಕನ್ನು ಪೈಲಟ್ ಯೋಜನೆಯಾಗಿ ತೆಗೆದುಕೊಂಡಿದ್ದು 18,71,799 ಪುಟಗಳನ್ನು ಡಿಜಿಟಲೀಕರಣ ಆಗಿದೆ. ಎ.ಸಿ. ಹಾಗೂ ಡಿಸಿ ಕೋರ್ಟ್‍ನಲ್ಲಿ 90 ದಿನದೊಳಗೆ ಇತ್ಯರ್ಥ ಪಡಿಸುವ ಬಾಕಿ ಪ್ರಕರಣಗಳು ಕಡಿಮೆ ಇವೆ. ಕಂದಾಯ ಇಲಾಖೆಯ ಎಲ್ಲಾ ಅಧೀನ ಕಚೇರಿ ಗಳು ಇ-ಆಫೀಸ್ ಆಗಿದ್ದು, ಇ-ಆಫೀಸ್ ಪ್ರಕ್ರಿಯೆ ಯಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ ಎಂದರು.ಪುರಸಭಾ ಅಧ್ಯಕ್ಷರಾದ ಜಿ.ಎಸ್. ಕಿರಣ್, ಉಪಾಧ್ಯಕ್ಷರಾದ ಹೀನಾ ಕೌಸರ್, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ಎಲ್ಲಾ ತಾಲೂಕುಗಳ ತಹಶೀಲ್ದಾರರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು