LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್‌ಕುಮಾರ್

ಬೆಂಗಳೂರು: ನವೆಂಬರ್ ೨೦ರ ಬಳಿಕ ನಿಮ್ಮೆಲ್ಲರನ್ನು ಭೇಟಿಯಾಗುತ್ತೇನೆ ಎಂದು ಸಾಮಾಜಿಕ ಜಾಲತಾಣ ದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್‌ಕುಮಾರ್.
ಸಾಮಾಜಿಕ ಜಾಲತಾಣದಲ್ಲಿ ತಮಗೆ ತಗುಲಿದ್ದ ಚಿಕನ್‌ಗುನ್ಯಾ ಸೋಂಕು, ಮನೆ ಬಿಟ್ಟು ೮೧ ದಿನಗಳ ಕಾಲ ಹೊರಗಿದ್ದ ನೆನಪು ಗಳನ್ನು ಭಾವನಾತ್ಮಕವಾಗಿ ಹಂಚಿಕೊA ಡಿದ್ದಾರೆ. ನನ್ನ ಎಲ್ಲಾ ಆತ್ಮೀಯ ಬಂಧುಗಳಿಗೆ #ನಿಮ್ಮ_ಸುರೇಶ್_ಕುಮಾರ್ ಮಾಡುವ ನಮಸ್ಕಾರಗಳು.
೮೧ ದಿನಗಳ ನಂತರ ನಾನು ನಮ್ಮ ಮನೆಗೆ ವಾಪಸ್ಸು ಬಂದಿದ್ದೇನೆ. ನಾನು ಮನೆಗೆ ಬಂದಾಗ ನನ್ನಮ್ಮನ ಮುಖದ ಮೇಲೆ ಉಕ್ಕಿ ಬಂದ ಭಾವನೆ ಕಂಡು ಕಣ್ಣೀರು ಬಂತು.
ತುರ್ತು ಪರಿಸ್ಥಿತಿಯಲ್ಲಿ ಕಳೆದ ೧೫ ತಿಂಗಳ ಸೆರೆಮನೆ ವಾಸದ ಅವಧಿ ಬಿಟ್ಟರೆ ಇದೇ ನಾನು ನನ್ನ ಮನೆ ಬಿಟ್ಟು ಇಷ್ಟು ದೀರ್ಘಕಾಲ ಇದ್ದದ್ದು. ಈ ೮೧ ದಿನ ನಾನು ಅನುಭವಿಸಿದ ಚಿಕನ್ ಗುನ್ಯಾ ಗಂಭೀರ ಸಮಸ್ಯೆ, ನೋವು, ಸಂಕಟ, ವೇದನೆ, ಆತಂಕ. ವೈದ್ಯರು ನೀಡಿದ ಅತ್ಯುತ್ತಮ ಚಿಕಿತ್ಸೆ, ನನ್ನನ್ನು ಜತನವಾಗಿ ನೋಡಿಕೊಂಡ ನನ್ನ ಕುಟುಂಬ, ಎಂತೆAಥ ಪರಿಸ್ಥಿತಿಯಲ್ಲಿಯೂ ನನ್ನ ಜೊತೆಗೆ ನಿಂತ ನನ್ನ ಹತ್ತಿರದ ಮಿತ್ರರ ತಂಡ, ನನ್ನ ಆರೋಗ್ಯ ಸುಧಾರಣೆಗಾಗಿ ಹಾರೈಸಿದ, ವಿವಿಧ ದೇವಸ್ಥಾನಗಳಲ್ಲಿ ನನ್ನ ಹೆಸರಿನಲ್ಲಿ ಪೂಜೆ ಸಲ್ಲಿಸಿರುವ ಅಸಂಖ್ಯಾತ ಕಾರ್ಯಕರ್ತರು - ಹಿತೈಷಿಗಳು...
ಈ ಎಲ್ಲವೂ ನನಗೆ ಪುನರ್ಜನ್ಮ ನೀಡಿದೆ. ಇದು ನಿಜಕ್ಕೂ ನನಗೆ ಒಂದು ಹೊಸ ಹುಟ್ಟು. ಇನ್ನೂ ಕೆಲವು ದಿನಗಳು ನಾನು ವಿಶ್ರಾಂತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ವೈದ್ಯರು ಸೂಚನೆ ನೀಡಿದ್ದಾರೆ.
ಕೆಲವೇ ದಿನಗಳಲ್ಲಿ ನನ್ನ ಸಹಜ ದೈನಂದಿನ ಚಟುವಟಿಕೆಗಳನ್ನು ಪ್ರಾರಂಭಿಸುತ್ತೇನೆ. ನಾಗರಿಕರನ್ನು ಭೇಟಿ ಮಾಡುವುದು, ಅಧಿಕಾರಿಗಳ ಸಭೆ ನಡೆಸುವುದು, ನಾಗರಿಕರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವುದು.
ಈ ಸಂಗತಿಗಳನ್ನು ಮಾಡಲು ಒಂದು ಸಮಯ ಸೂಚಿ ಸಿದ್ಧಪಡಿಸುತ್ತಿದ್ದೇನೆ. ಎಲ್ಲರ ಹಾರೈಕೆ, ಆಶೀರ್ವಾದ, ಸಹಕಾರ ನನ್ನ ಮೇಲೆ ಹೀಗೆ ಇರಲಿ. ನವಂಬರ್ ಇಪ್ಪತ್ತರ ನಂತರ ಪ್ರಾರಂಭವಾಗುವ ಈ ಭೇಟಿಗೆ ತಾವೆಲ್ಲರೂ ಸಹಕರಿಸಬೇಕೆಂದು ಕೋರುತ್ತೇನೆ. ಹೀಗೆ ಭಾವನಾತ್ಮಕವಾಗಿ ಪೋಸ್ಟ್ ಮಾಡಿರುವ ಎಸ್. ಸುರೇಶ್‌ಕುಮಾರ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು