LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮರಳು: ಮಲ್ಲಿಕಾರ್ಜುನ್

ಬೆಂಗಳೂರು : ರಾಜ್ಯ ಸರಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ಉದ್ದೇಶದಿಂದ ಮರಳು ಬ್ಲಾಕ್‌ಗಳನ್ನು ಹಂಚಿಕೆ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಸಮಿತಿಗಳಿಗೇ ನೀಡಲು ನಿರ್ಧರಿಸಲಾಗಿದೆ. ನೂತನ ಮರಳು ನೀತಿ ಜಾರಿಗೆ ತರುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಅದರಂತೆ ಸಾರ್ವಜನಿಕ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅತ್ಯಂತ ಕಡಿಮೆ ದರದಲ್ಲಿ ಮರಳನ್ನು ಪೂರೈಕೆ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಖಾಸಗಿ ಬಳಕೆಗೆ ಮರಳನ್ನು ಕಡಿಮೆ ಬೆಲೆಗೆ ಪೂರೈಸಲು ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.

‘ಒಂದು, ಎರಡು ಮತ್ತು ಮೂರನೇ ಶ್ರೇಣಿಯ ಹಳ್ಳಗಳಿಂದ ಮರಳನ್ನು ತೆಗೆದು ವಿಲೇವಾರಿ ಮಾಡುವ ಹೊಣೆಗಾರಿಕೆಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ. ಸಾರ್ವಜನಿಕ ಕಾಮಗಾರಿಗಳಿಗೆ ಪ್ರತಿ ಟನ್‌ಗೆ 300 ರೂಪಾಯಿಯಂತೆ ಮರಳು ಪೂರೈಕೆ ಮಾಡಲಾಗುತ್ತಿದೆ’ ಎಂದರು. ಸಾರ್ವಜನಿಕರಿಗೆ ಪೂರೈಸಲು ರಾಜ್ಯಾದ್ಯಂತ ನದಿಪಾತ್ರದಿಂದ ತೆಗೆಯುವ ಪ್ರತಿ ಟನ್ ಮರಳಿಗೆ ಸರ್ಕಾರ ಏಕರೂಪದ ಬೆಲೆ 850 ರೂ. ನಿಗದಿ ಪಡಿಸಿದೆ. ಈ ನೂತನ ನೀತಿಯಂತೆ ಮರಳು ಬ್ಲಾಕ್‍ಗಳ ಟೆಂಡರ್ ಅನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್‍ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಟೆಂಡರ್ ಪ್ರಕ್ರಿಯೆಯನ್ನು ಇ-ಪೋರ್ಟಲ್‍ನಲ್ಲಿ ನಡೆಸಲಾಗುತ್ತಿದ್ದು, ಸದರಿ ಪೋರ್ಟಲ್ ಮೂಲಕ ಆಸಕ್ತ ವ್ಯಕ್ತಿ/ಖಾಸಗಿ ಕಂಪನಿ/ಸಂಸ್ಥೆಯವರು ಅರ್ಜಿ ಸಲ್ಲಿಸಲು ಜಿಲ್ಲಾವಾರು ಅಧಿಸೂಚನೆ ಜಾರಿ ಮಾಡಲಾಗುವುದು ಎಂದು ಮಲ್ಲಿಕಾರ್ಜುನ್ ವಿವರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು