LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಾರ್ವಜನಿಕರ ಕುಂದುಕೊರತೆ ನಿವಾರಿಸಲು BBMP ಕ್ರಮ: ನಗರದ ಎಲ್ಲಾ 8 ವಲಯಗಳಲ್ಲೂ ನೋಡಲ್‌ ಅಧಿಕಾರಿ ನಿಯೋಜನೆ

ಬೆಂಗಳೂರು: ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಿರುವ ಬಿಬಿಎಂಪಿ, ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.

ಡಿಸಿಎಂ ಡಿಕೆ,ಶಿವಕುಮಾರ್ ಅವರ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಗರದ ಎಲ್ಲಾ ಎಂಟು ವಲಯಗಳ 217 ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ತಮಗೆ ನಿಯೋಜಿಸಿರುವ ವಾರ್ಡ್‌ನಲ್ಲಿ ಕಡ್ಡಾಯವಾಗಿ ಪ್ರತಿ ಬುಧವಾರ ಕಚೇರಿಯ ಅವಧಿಯಲ್ಲಿ ಹಾಜರಿರಬೇಕು. ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಅವರ ದೂರು, ಸಮಸ್ಯೆಗಳನ್ನು ಆಲಿಸಬೇಕು. ಇತರೆ ಅಧಿಕಾರಿಗಳ ಸಹಯೋಗದೊಂದಿಗೆ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಸಭೆ ನಡೆಯುವ ಕುರಿತು ಪ್ರಚಾರ ಮಾಡಬೇಕು. ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳಿದ್ದರೆ, ಆಯಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಯನ್ನು ವಾರ್ಡ್ ಹಂತದಲ್ಲಿಯೇ ಪರಿಹರಿಸಬೇಕು. ಅಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ವಲಯ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಸೂಕ್ತ ಪ್ರಸ್ತಾವವನ್ನು ಸಲ್ಲಿಸಬೇಕು,

ವಾರ್ಡ್ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಪ್ರಸ್ತಾವನೆಗಳನ್ನು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ವಾರ್ಡ್‌ಗೆ ನಿಯೋಜಿಸಿರುವ ನೋಡಲ್ ಅಧಿಕಾರಿಯ ಹೆಸರು, ವಾರ್ಡ್ ಹೆಸರು, ಹುದ್ದೆ ಹಾಗೂ ದೂರವಾಣಿ ಸಂಖ್ಯೆಯುಳ್ಳ ಪಟ್ಟಿಯನ್ನು ಪಾಲಿಕೆಯ ವೆಬ್‌ಸೈಟ್‌ bbmp.gov.in/home ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು