LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸಾರ್ವಜನಿಕವಾಗಿ ಮಹಿಳೆ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಸಾರ್ವಜನಿಕವಾಗಿ ಮಹಿಳೆಯೊಬ್ಬರ ಬಟ್ಟೆ ಹರಿದು ಆಕೆಯ ಮೇಲೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೃತ್ಯದ ವಿಡಿಯೋ ಮೊಬೈಲ್ ಫೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದ್ದು, ಸದ್ಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗಿದೆ.
ಈ ಘಟನೆ ಸಂಬAಧಪಟ್ಟAತೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ಘಟನೆ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನ.೧೩ರಂದು ಘಟನೆ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈಬಗ್ಗೆ ಕ್ರಮಕ್ಕಾಗಿ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು