LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಾಹಸ ಸಿಂಹನ ನೆನಪು

2009ರ ಡಿಸೆಂಬರ್ 30ರ ಮುಂಜಾನೆ ಬಂದ ಸುದ್ದಿ, ಇಡೀ ಕನ್ನಡ ಚಿತ್ರರಂಗಕ್ಕೆ ಅರಗಿಸಿಕೊಳ್ಳಲಾಗದಂತಹ ನೋವನ್ನು ನೀಡಿತು.ಇದೀಗ ವಿಷ್ಣುವರ್ಧನ್ ಇಲ್ಲದೇ 15 ವರ್ಷ ಸಂದಿದೆ. ಆದರೆ ವಿಷ್ಣುವರ್ಧನ್ ಕಾಲವಾಗಿ ಹದಿನೈದು ವರ್ಷಗಳಾದರೂ ಅವರ ಅಭಿಮಾನಿಗಳು ಅವರನ್ನು ಎಂದಿಗೂ ಮರೆತಿಲ್ಲ. ವಿಷ್ಣುವರ್ಧನ್ ಅಭಿನಯಿಸಿದ ಸಿನೆಮಾಗಳು, ವಿಭಿನ್ನ ಪಾತ್ರಗಳು ಮತ್ತು ಸಮಾಜಮುಖೀ ಕಾರ್ಯಗಳ ಮೂಲಕ ಅಭಿಮಾನಿಗಳು ತಮ್ಮ ನೆಚ್ಚಿನ `ಸಾಹಸ ಸಿಂಹ'ನನ್ನು ಸದಾ ಜೀವಂತವಾಗಿರಿಸುವ ಮಾಡಿಕೊಳ್ಳುವ ಕೆಲಸ ಮಾಡಿದ್ದಾರೆ.

ಹೌದು, `ಜಿ. ಕೆ. ಸಿನಿ ಫೈಲ್ಸ್  ಪ್ರೊಡಕ್ಷನ್ಸ್' ಬ್ಯಾನರ್‍ನಲ್ಲಿ ಜಿ. ಕೆ. ಶಶಿರಾಜ್ ದೊರೈ `ಸಿಂಹದ ಹಾದಿ' ಎಂಬ ಟೆಲಿಚಿತ್ರವನ್ನು ನಿರ್ಮಿಸಿ ತೆರೆಗೆ ತರುತ್ತಿದ್ದಾರೆ. ಬಾಲ್ಯದಿಂದಲೂ ವಿಷ್ಣುವರ್ಧನ್ ಅಭಿಮಾನಿಯಾಗಿರುವ, ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಅಭಿನಯ ಮತ್ತು ನಿರ್ದೇಶನ ವಿಭಾಗದಲ್ಲಿ ತೊಡಗಿಸಿಕೊಂಡಿರುವ ಶಶಿರಾಜ್ ದೊರೆ, ವಿಷ್ಣುವರ್ಧನ್ ಅವರ ಅಭಿಮಾನದಿಂದ `ಸಿಂಹದ ಹಾದಿ' ಟೆಲಿಚಿತ್ರವನ್ನು ನಿರ್ಮಿಸಿ, ತೆರೆಗೆ ತರುವ ಸಾಹಸಕ್ಕೆ ಕೈ ಹಾಕಿದ್ದಾರೆ.

ವಿಷ್ಣುವರ್ಧನ್ ಪುಣ್ಯಸ್ಮರಣೆಗೂ ಮುನ್ನ ನಡೆದ ಸಮಾರಂಭದಲ್ಲಿ, ಹಿರಿಯ ನಿರ್ದೇಶಕ ಎಸ್. ವಿ. ರಾಜೇಂದ್ರ ಸಿಂಗ್ ಬಾಬು, ಜೋ ಸೈಮನ್, 'ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ `ಅಧ್ಯಕ್ಷ ಕೃಷ್ಣೇಗೌಡ, 'ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ' ಅಧ್ಯಕ್ಷ ಭಾ. ಮ. ಹರೀಶ್, 'ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಹಿರಿಯ ನಟಿ ಲಕ್ಷ್ಮೀದೇವಮ್ಮ, ವಿಧಾನ ಪರಿಷತ್ ಸದಸ್ಯ ವೀರಯ್ಯ ಸೇರಿದಂತೆ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಇಂಥದ್ದೊಂದು ಅನೇಕ ಗಣ್ಯರು ಹಾಜರಿದ್ದು, 'ಸಿಂಹದ ಹಾದಿ' ಟೆಲಿಚಿತ್ರದ ಟ್ರೇಲರ್ ಅನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಕೋರಿದರು.

ಇದೇ ವೇಳೆ ಮಾತನಾಡಿದ 'ಸಿಂಹದ ಹಾದಿ' ಟೆಲಿಚಿತ್ರದ ನಿರ್ದೇಶಕ ಶಶಿರಾಜ್ ದೊರೆ, 'ವಿಷ್ಣುವರ್ಧನ್ ಅವರನ್ನು ಆದರ್ಶವಾಗಿಟ್ಟುಕೊಂಡು ಬದುಕನ್ನು ಕಟ್ಟಿಕೊಂಡ ನಾಲ್ಕು ಜನರ ಜೀವನವನ್ನು ಆಧರಿಸಿ, ಈ ಟೆಲಿಚಿತ್ರವನ್ನು ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಅವರ ಚಿತ್ರಗಳು, ಅವರು ನಿರ್ವಹಿಸಿರುವ ಪಾತ್ರಗಳು, ಅವರ ಸಾಮಾಜಿಕ ಕಾರ್ಯಗಳು ಎಲ್ಲವನ್ನೂ ಆಧರಿಸಿ ಈ ಟೆಲಿಚಿತ್ರವನ್ನು ಮಾಡಿದ್ದೇವೆ. ವಿಷ್ಣುವರ್ಧನ್ ಅಭಿಮಾನಿಗಳು ಈ ಕಾರ್ಯದಲ್ಲಿ ನಮಗೆ ಬೆನ್ನೆಲುಬಾಗಿ ನಿಂತಿದ್ದಾರೆ. ವಿಷ್ಣುವರ್ಧನ್ ಅವರ ಜೀವನ-ಸಾಧನೆಯನ್ನು ಮುಂದಿನ ಜನರಿಗೆ ತೋರಿಸುವ ಸಣ್ಣ ಕೆಲಸ ಈ ಟೆಲಿಫಿಲಂನಲ್ಲಿ ಆಗಿದೆ' ಎಂದು ವಿವರಣೆ ನೀಡಿದರು.

ಇನ್ನು 'ಸಿಂಹದ ಹಾದಿ' ಟೆಲಿಫಿಲಂನಲ್ಲಿ ಶಶಿರಾಜ್ ದೊರೆ, ಸಾಯಿ ಜ್ಯೋತಿ, ಸವಿತಾ, ಪಲ್ಲವಿ ರಾವ್, ಸಂನ್ಸಿಕಾ, ಪ್ರಕೃತಿ, ಹರಿ ಪ್ರಕಾಶ್, ಮಂಜು, ಮಹೇಶ್ ಗುರು ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ 'ಸಿಂಹದ ಹಾದಿ' ಟೆಲಿಫಿಲಂ ಸುಮಾರು 75ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು