LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾಹಿತ್ಯ ಜಾತ್ರೆಗೆ ಚಾಲನೆ ಗಣ್ಯರಿಂದ ರಾಷ್ಟ್ರ, ನಾಡ ಪರಿಷತ್ ಧ್ವಜಾರೋಹಣ

ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತ ಚಾಲನೆ ದೊರೆತಿದೆ.

ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಶಿ ಸಾಹಿತ್ಯ ಪರಿಷತ್ತಿನ ಧ್ವಜ ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ನೆರವೇರಿಸಿದರು.ಸಮ್ಮೇಳನದ ಸೃವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ,ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿ ಸಿದ್ದೇಗೌಡ , ಶಾಕರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಧ್ವಜಾರೋಹಣದ ನಂತರ 87ನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊರು ಚನ್ನಬಸಪ್ಪ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಸಮ್ಮೇಳನದ ವೇದಿಕೆಗೆ ಕರೆತರಲಾಯಿತು.ನಿಗದಿತ ಸಮಯಕ್ಕೆ ಸಮ್ಮೇಳನಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ,ಜಿಲ್ಲಾ ಉಸ್ತುವಾರಿ ಸಚಿವ, ಚಲುವರಾಯಸ್ವಾಮಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ ಚಂದ್ರಶೇಖರ ಕಂಬಾರ, ನಿಖಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು