LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂಗೆ ಕ್ಲೀನ್ ಚಿಟ್? ಮುಡಾ ಅಕ್ರಮ ತನಿಖೆ ಪ್ರಕರಣದ ಬಗ್ಗೆ ಸ್ನೇಹಮಯಿ ಹೇಳಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯಿಂದ ಅಕ್ರಮವಾಗಿ ಹಂಚಿಕೆಯಾಗಿದ್ದ ನಿವೇಶನಕ್ಕೆ ವಿಚಾರವಾಗಿ ಲೋಕಾಯುಕ್ತರಲ್ಲಿ ದಾಖಲಾಗಿರುವ ದೂರಿನ್ವಯ ವಿಚಾರಣೆ ನಡೆಸಿ, ಕೋರ್ಟ್‍ಗೆ ವರದಿ ನೀಡಬೇಕಾಗಿದ್ದು, ಆ ವರದಿಯಲ್ಲಿ ಸಿಎಂ ಸಿದ್ಧರಾಮಯ್ಯರ ಕುಟುಂಬಕ್ಕೆ ಬಿಗ್ ರಿಲೀಫ್ ನೀಡಲಾಗಿದೆ ಎಂಬ ಮಹತ್ವದ ಅಂಶ ಹೊರಗೆ ಬಿದ್ದಿದೆ.ಮುಡಾ ಪ್ರಾಧಿಕಾರದಲ್ಲಿ ಸಿಎಂ ಸಿದ್ಧರಾಮಯ್ಯರ ಕುಟುಂಬಕ್ಕೆ ಅವರ ಪತ್ನಿ ಹೆಸರಿನಲ್ಲಿ ಬರೋಬ್ಬರಿ 14 ಖಾಲಿ ನಿವೇಶನಗಳು ಹಂಚಿಕೆ ಮಾಡಲಾಗಿತ್ತು.

ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ರು. ದೂರಿನ್ವಯ ವಿಚಾರಣೆ ನಡೆಸಿರುವ ಲೋಕಾಯುಕ್ತರು ವರದಿ ಸಿದ್ಧಪಡಿಸಿದ್ದು, ಮುಡಾ ಅಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯರ ಪಾತ್ರವೇನು ಇಲ್ಲ. ಇಲ್ಲಿ ಆಗಿರುವ ಎಡವಟ್ಟುಗಳು ಅಧಿಕಾರಿಗಳಿಂದ ಎಂದು ವರದಿಯಲ್ಲಿ ಉಲ್ಲೇಖಿಸಿದ್ದು, ಆ ವರದಿಯನ್ನು ಸೋಮವಾರ ಕೋರ್ಟ್‍ಗೆ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿಯನ್ನು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಸುದ್ದಿವಾಹಿನಿಯೊಂದರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಸಿಎಂ ಪ್ರಭಾವ ಬೀರಲಾಗಿದೆ. ಮೂಡಾದಲ್ಲಿ ನಡೆದಿರುವ ಹಗರಣಗಳ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಅಧಿಕಾರದಲ್ಲಿದ್ದರು ಹಗರಣ ಸಂಬಂಧ ನಡೆದ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ. ಇದೀಗ ಲೋಕಾಯುಕ್ತರು ನಡೆಸಿರುವ ತನಿಖೆಯಲ್ಲಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ತನಿಖೆ ನಡೆದಿದೆ. ಹಾಗಾಗಿ ಅವರಿಗೆ ಮತ್ತು ಅವರ ಪತ್ನಿಯವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು ಇದೊಂದು ನಿರೀಕ್ಷಿತ ಬೆಳವಣಿಗೆ. ಸಿದ್ದರಾಮಯ್ಯ ಅವರ ಪ್ರಭಾವಕ್ಕೊಳಗಾಗಿ ಅಧಿಕಾರಿಗಳು ತಪ್ಪೆಸಗಿದ್ದಾರೆ.

ಡಿನೋಟಿಫೈ ಮತ್ತು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದ್ದು, ಅಧಿಕಾರಿಗಳು ತಪ್ಪೆಸಗಿದ್ದಾರೆ ಎಂದು ದೂರಿರುವ ಸ್ನೇಹಮಯಿ ಕೃಷ್ಣ ಅವರು ಇದನ್ನು ಅರಿತೇ ತಾವು ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.ಸಿಬಿಐ ತನಿಖೆಗೆ ನ್ಯಾಯಾಲಯ ಅನುಮತಿ ನೀಡಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು