LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂಗೆ ಬಹಿರಂಗ ಪತ್ರ ಜವಾಬ್ದಾರಿ ಅರಿತು ಬಜೆಟ್ ಮಂಡಿಸಲು ವಿಜಯೇಂದ್ರ ಸಲಹೆ

ಬೆಂಗಳೂರು: ನಿಮ್ಮ ಜವಾಬ್ದಾರಿ ಅರ್ಥಮಾಡಿಕೊಂಡು ಬಜೆಟ್ ಮಂಡಿಸಿ ಎಂದು ಸಿಎಂಗೆ ಸಲಹೆ ಮಾಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಲ್ಕು ಪುಟಗಳ ಬಹಿರಂಗ ಪತ್ರವನ್ನು ಬರೆದಿದ್ದಾರೆ.ನೀವು ಅಧಿಕಾರಕ್ಕೆ ಬಂದ ಬಳಿಕ ದಿನನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್, ಹಾಲು ಜನರ ಜೇಬು ಸುಡುತ್ತಿದೆ. ಇದನ್ನೆಲ್ಲಾ ಮನಗಂಡು ಅರ್ಥಪೂರ್ಣ ಬಜೆಟ್ ಮಂಡಿಸಿ ಎಂದಿದ್ದಾರೆ.

ಪತ್ರದಲ್ಲಿ ಮೊದಲಿಗೆ ಮಾನ್ಯ ಸಿದ್ಧರಾಮಯ್ಯನವರೇ ನೀವು 16 ನೇ ದಾಖಲೆಯ ಬಜೆಟ್ ಮಂಡಿಸುತ್ತಿದ್ದೀರಿ. ನಿಮಗೆ ಅಭಿನಂದನೆಗಳು ಎಂದು ಹಾರೈಸಿದ್ದಾರೆ. ಬಳಿಕ ಪತ್ರದಲ್ಲಿ ರಾಜ್ಯದಲ್ಲಿನ ಆರ್ಥಿಕ ಸ್ಥಿತಿಗತಿಗಳ ಕುರಿತು ಸಮಗ್ರ ವಿವರಣೆ ನೀಡಿದ್ದು,ತಮ್ಮ ಕಾಂಗ್ರೆಸ್ ಪಕ್ಷ ಚುನಾವಣೆಯ ಹೊಸ್ತಿಲಿನಲ್ಲಿ ಸಾಲು ಸಾಲು ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದೆ. ಗ್ಯಾರೆಂಟಿಗಳ ಅನುಷ್ಠಾನಕ್ಕೆ ಸರ್ಕಾರದ ಬೊಕ್ಕಸ ಖಾಲಿ ಮಾಡುತ್ತಿದೆ.

ಜೊತೆಗೆ ಕಳೆದ ಎರಡು ವರ್ಷ 2023-24, 2024-25 ನೇ ಸಾಲಿನ ಬಜೆಟ್‍ನಲ್ಲಿ ಶಾಸಕರಿಗೆ ಕ್ಷೇತ್ರಾಭಿವೃದ್ಧಿ ಅನುದಾನವನ್ನು ನೀಡಿಲ್ಲ. ಯಾವುದೇ ಕಾಮಗಾರಿಗಳು ಪೂರ್ಣವಾಗಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಕಳೆದೆರಡು ವರ್ಷಗಳ ಮಾದರಿಯಲ್ಲಿಯೇ ಈ ಬಾರಿ ಬಜೆಟ್ ಮಂಡಿಸಬೇಡಿ ಎಂದು ಕೇಳಿಕೊಂಡಿದ್ದಾರೆ.ರಾಜ್ಯದಲ್ಲಿ ಕಳೆದೆರಡು ವರ್ಷಗಳ ಗ್ಯಾರೆಂಟಿಗಳ ಹಿನ್ನೆಲೆಯಲ್ಲಿ, ದಶಕಗಳಷ್ಟು ಅಭಿವೃದ್ಧಿ ಹಿಂದಕ್ಕೆ ಹೋಗಿದೆ. ಮಹಿಳೆಯರಿಗೆ ಅಸುರಕ್ಷತೆ, ಬಾಣಂತಿಯರ ಸರಣಿ ಸಾವು, ಮೆಟ್ರೋ ದರ ಏರಿಕೆ, ನೀರಿನ ದರ ಏರಿಕೆ, ಪೆಟ್ರೋಲ್ ದರ ಏರಿಕೆ, ರೈತರ ಆತ್ಮಹತ್ಯೆಗಳು ನಿಮ್ಮ ಸರ್ಕಾರವನ್ನು ಬಾಧಿಸುತ್ತಿಲ್ಲವೇ? ನಿಮ್ಮದೇ ಸರ್ಕಾರದಲ್ಲಿ ಉಪ- ಮುಖ್ಯಮಂತ್ರಿಗಳಾಗಿ, ಬೆಂಗಳೂರು ನಗರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿ.ಕೆ. ಶಿವಕುಮಾರ್, "ಬೆಂಗಳೂರನ್ನು ಸುಸ್ಥಿರಗೊಳಿಸಲು ಭಗವಂತನ ಕೈಯಿಂದಲೂ ಸಾಧ್ಯವಿಲ್ಲ" ಎಂದಿದ್ದಾರೆ.

ಇತ್ತೀಚೆಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿನ ಗಲಭೆ ಪ್ರಕರಣ, ಪೊಲೀಸರ ಮೇಲೆ ದೌರ್ಜನ್ಯ, ತುಷ್ಟೀಕರಣ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ. ತಮ್ಮ ಆಡಳಿತ ಅವಧಿಯಲ್ಲಿ ಶಿಕ್ಷಣ ಇಲಾಖೆ ನಿರ್ಲಕ್ಷ್ಯ. 9 ವಿವಿಗಳನ್ನು ಮುಚ್ಚಲು ಮುಂದಾಗಿರುವುದು ದುರದೃಷ್ಟಕರ. ಶಿಕ್ಷಣಕ್ಕೆ ಆದ್ಯತೆ ನೀಡುವ ಬದಲಿಗೆ ಮುಚ್ಚುವ ಹಂತಕ್ಕೆ ತಲುಪಿದೆ. ತಾವು ಎರಡೇ ವರ್ಷದಲ್ಲಿ 2 ಲಕ್ಷ ಕೋಟಿ ಸಾಲ ಮಾಡಿದ್ದೀರಿ. ಬಸ್ಸಿಗೆ ಪ್ರಯಾಣ ದರ ಶೇ. 15% ರಷ್ಟು ಏರಿಕೆ ಮಾಡಿದ್ದೀರಿ. ಕರ್ನಾಟಕ ರಾಜ್ಯವು ದಿವಾಳಿಯಾಗುವತ್ತಾ ಸಾಗಿದೆ. ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸಂಬಳ ಕೊಡಲು ಹಣವಿಲ್ಲ. ಸಾರಿಗೆ ಇಲಾಖೆಗೆ ಸರ್ಕಾರ ಕೊಡಬೇಕಾದ 7 ಸಾವಿರ ಕೋಟಿ ಬಾಕಿಯಿದೆ.

ವಿದ್ಯುತ್ ಬಿಲ್ ಕಟ್ಟಲಾಗದೇ ಎಲ್ಲಾ ಎಸ್ಕಾಂಗಳು ದಯನೀಯ ಸ್ಥಿತಿ ತಲುಪಿದೆ. ಇಂತಹ ಸ್ಥಿತಿಯಲ್ಲಿ ನಿಮ್ಮ ಸಂಪುಟದ ಸಹೋದ್ಯೋಗಿಗಳು ನೀಡುತ್ತಿರುವ ಹೇಳಿಕೆಗಳು ನಿಮ್ಮ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿಲ್ಲವೇ? ತಾವು ಈ ಬಾರಿ ಮಂಡಿಸಲಿರುವ ಬಜೆಟ್‍ನಲ್ಲಿ ರಾಜ್ಯವನ್ನು ಸುಸ್ಥಿರ ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ ಮತ್ತು ವಿವೇಚನಾಯುಕ್ತ ಹಣಕಾಸಿನ ಅಡಿಪಾಯವಾಗಲಿ. ಹೀಗೆ ಸಾಲು ಸಾಲು ವಿಚಾರವನ್ನು ಪತ್ರದಲ್ಲಿ ಪ್ರಸ್ತಾಪಿಸಿ ಸಿಎಂ ಸಿದ್ಧರಾಮಯ್ಯರನ್ನು ವಿಜಯೇಂದ್ರ ಎಚ್ಚರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು