LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂಗೆ ಹಿನ್ನೆಡೆ ಮುಡಾ ಪ್ರಕರಣ: ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಸರಿಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟು ಪ್ರಾಸಿಕ್ಯೂಷನ್ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಹೈಕೋರ್ಟ್‍ನಲ್ಲಿಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಮುಡಾ ಹಗರಣದ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ ಕ್ರಮ ಸರಿಯಿದೆ ಎಂದು ತೀರ್ಪು ನೀಡಿದ್ದಾರೆ.ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.ಮುಡಾ ಪ್ರಕರಣದಲ್ಲಿ ಮುಖ್ಯ ಮಂತ್ರಿಯವರ ಕುಟುಂಬದವರೇ ಫಲಾನುಭವಿಗಳಾಗಿದ್ದಾರೆ.

ಹೀಗಾಗಿ ರಾಜ್ಯಪಾಲರು ಕೈಗೊಂಡಿರುವ ಕ್ರಮ ಸೂಕ್ತವಾಗಿದೆ ಎಂದು ಆದೇಶದಲ್ಲಿ ತಿಳಿಸಿರುವ ನ್ಯಾಯಮೂರ್ತಿಗಳು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದ ಎಲ್ಲಾ ಅಂಶಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.ನ್ಯಾಯಮೂರ್ತಿಯವರು ಇಂದು ಪ್ರಕರಣದ ವಿಚಾರಣೆ ಸಂಬಂಧ ನಿಗಧಿಯಾಗಿದ್ದ 12ಗಂಟೆಗೆ ಸರಿಯಾಗಿ ನ್ಯಾಯಪೀಠದಲ್ಲಿ ಆಸಿನರಾಗಿ ತೀರ್ಪು ಪ್ರಕಟಿಸಿದರು.

ಈ ಸಂದರ್ಭದಲ್ಲಿ ಸಿಎಂ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಗ್ವಿ ಅವರು ವಿಡೀಯೋ ಕಾನ್ಪರೆನ್ಸ್ ಮುಖಾಂತರ ನ್ಯಾಯಾಲಯದ ಮುಂದೆ ಹಾಜರಾದರು.ತೀರ್ಪು ಪ್ರಕಟಣೆಗೂ ಮುನ್ನಾ ಇಂದು ಬೆಳಗ್ಗೆಯಿಂದ ಕಾವೇರಿ ನಿವಾಸದಲ್ಲೇ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11 ಗಂಟೆಗೆ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ನಿಗಧಿಯಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಅಲ್ಲಿಂದ ತೆರಳುವ ವೇಳೆಗೆ ತೀರ್ಪು ಹೊರಬಿದ್ದಿತ್ತು. ಈ ಸಂದರ್ಭದಲ್ಲಿ ಸುದ್ದಿಗಾರರು ಪ್ರತಿಕ್ರಿಯೆ ಕೇಳಲು ಮುಂದದಾಗ ಆಮೇಲೆ ಉತ್ತರಿಸುತ್ತೇನೆ ಎಂದಷ್ಟೇ ಹೇಳಿ ಅಲ್ಲಿಂದ ತೆರಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು