LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಿಎಂ & ಡಿಸಿಎಂ ಬಣ ಭಿನ್ನಾಭಿಪ್ರಾಯ: ನಡುವಲ್ಲೇ ಇಂದು ಕಾಂಗ್ರೆಸ್ ಸರಣಿ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿಯಲ್ಲಿ ಕೆಪಿಸಿಸಿ ವಿಸ್ತೃತ ಸದಸ್ಯರ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಸಭೆ ಸೇರಿ ಸರಣಿ ಸಭೆಗಳು ಸೋಮವಾರ ನಡೆಯಲಿವೆ.

ಪ್ರತ್ಯೇಕ ಡಿನ್ನರ್ ಸಭೆ, ಅಧಿಕಾರ ಹಂಚಿಕೆ ಕುರಿತ ಬಹಿರಂಗ ಹೇಳಿಕೆ, ಜಾತಿಗಣತಿ ಮತ್ತಿತರ ವಿಚಾರಗಳಿಂದ ರಾಜ್ಯ ರಾಜಕೀಯದಲ್ಲಿ ಬಣ ರಾಜಕೀಯ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಹೈಕಮಾಂಡ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗಿಯಾಗಲಿರುವ ಸುರ್ಜೇವಾಲಾ ಅವರು ಪಕ್ಷದ ನಾಯಕರಿಗೆ ಒಗ್ಗಟ್ಟಿನ ಮಂತ್ರ ಪಠಿಸುವಂತೆ ಸೂಚನೆ ನೀಡುವ ಸಾಧ್ಯತೆಗಳಿವೆ.

ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕೆಪಿಸಿಸಿ ವಿಸ್ತೃತ ಸದಸ್ಯರ ಸಭೆಯಲ್ಲಿ ಬೆಳಗಾವಿಯಲ್ಲಿ ಗಾಂಧಿ ಭಾರತ ಸ್ಮರಣಾರ್ಥ ಜ.21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ್ ಸಮಾವೇಶದ ಪೂರ್ವಸಿದ್ಧತೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದೇ ವೇಳೆ ಇತರ ರಾಜಕೀಯ ವಿಷಯಗಳು ಮತ್ತು ಶಾಸಕರ ಕುಂದುಕೊರತೆಗಳು, ಕೆಲವು ಸಚಿವರ ನಿರ್ಲಕ್ಷ್ಯಯುತ ನಡೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇನ್ನು ಸಭೆಯಲ್ಲಿ ಸಿದ್ದು ಬಣ ಯಾವ ಯಾವ ವಿಚಾರಗಳನ್ನು ಪ್ರಸ್ತಾಪಿಸಲಿದೆ ಎಂಬುದೂ ಕುತೂಹಲ ಮೂಡಿಸಿದೆ.

ಸಭೆ ಮುಂದೂಡುವುದರ ಹಿಂದೆ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕೈವಾಡವಿದೆ ಎಂದು ತಿಳಿದ ನಂತರ ಸಿಎಂ ಬಣವು ಕಾಂಗ್ರೆಸ್ ಮತ್ತಷ್ಟು ಚುರುಕಾಗಿದ್ದು, ತಮ್ಮನ್ನು ಬಲಪಡಿಸಿಕೊಳ್ಳುವ ಯತ್ನವನ್ನು ತೀವ್ರಗೊಳಿಸಿದೆ.

ಸಭೆ ವೇಳೆ 2023 ರ ವಿಧಾನಸಭಾ ಚುನಾವಣೆ ವೇಲೆ ಎಸ್‌ಸಿ/ಎಸ್‌ಟಿಗಳಿಗೆ ಕಲ್ಯಾಣ ಕಾರ್ಯಕ್ರಮಗಳು ಮತ್ತು ಎಸ್‌ಸಿ ಕೋಟಾ ವರ್ಗೀಕರಣದ ಭರವಸೆ ನೀಡಿ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇದೀಗ ಭರವಸೆಯನ್ನು ಈಡೇರಿಸಬೇಕಿದೆ ಎಂದು ಸುರ್ಜೇವಾಲಾ ಅವರಿಗೆ ಮನಸ್ಸು ಪರಿವರ್ತಿಸುವ ಯತ್ನ ನಡೆಸುವ ಸಾಧ್ಯತೆಗಳಿವೆ.

ಕೆಪಿಸಿಸಿ ಅಧ್ಯಕ್ಷರನ್ನು ಹೊರತುಪಡಿಸಿ ಎಸ್‌ಸಿ/ಎಸ್‌ಟಿ ಶಾಸಕರೊಂದಿಗೆ ಸಭೆಯನ್ನು ನಡೆಸಲು ಅವರು ಯೋಜಿಸುತ್ತಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

ಇಂದು ಬೆಳಿಗ್ಗೆ ಕೆಪಿಸಿಸಿ ಸಾಮಾನ್ಯ ಸಭೆ ನಡೆಯಲಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ನಂತರ ಪಕ್ಷದ ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.

ಈ ಸಭೆಯಲ್ಲಿ ನಿಗಮಗಳಿಗೆ ಮತ್ತು ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರ ನೇಮಕಾತಿ ಮತ್ತು ಪಕ್ಷದ ಸಂಘಟನೆಯ ಬಗ್ಗೆಯೂ ಚರ್ಚೆಗಳು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇಂದು ನಡೆಯುವ ಕಾಂಗ್ರೆಸ್ ಪಕ್ಷದ ಎಲ್ಲಾ ಸಭೆಗಳಲ್ಲು ಸುರ್ಜೇವಾಲಾ ಅವರು ಹಾಜರಿರಲಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಸಿದ್ದರಾಮಯ್ಯ ಬಣದ ಇತರೆ ನಾಯಕರು ಮುಂದೂಡಲ್ಪಟ್ಟ ಎಸ್‌ಸಿ/ಎಸ್‌ಟಿ ಶಾಸಕರ ಸಭೆ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು