LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಿಎಂ ಮತ್ತು ಡಿಸಿಎಂ  ಬಣಗಳ ನಡುವಿನ ಕಚ್ಚಾಟ: ಕಾಂಗ್ರೆಸ್​  ನಾಯಕರಿಗೆ ಆತಂಕ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಷ್ಟೇ ಒಗ್ಗಟ್ಟಿನ ಬಲ ಪ್ರದರ್ಶನ ತೋರಿದರೂ ಅದರ ಒಳಬೇಗುದಿ ಮತ್ತು ಆಂತರಿಕ ಕಚ್ಚಾಟ ಆಗಾಗ್ಗೆ ಬಹಿರಂಗಗೊಳ್ಳುತ್ತಲೇ ಇರುತ್ತದೆ. ಕೆಲ ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ಕೆಲ ನಾಯಕರು ಸಿಎಂ ಜೊತೆ ಡಿನ್ನರ್​ನಲ್ಲಿ ಪಾಲ್ಗೊಂಡಿದ್ದು ಸಾಕಷ್ಟು ಹುಬ್ಬೇರಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣಗಳ ನಡುವಿನ ಕಚ್ಚಾಟವು ಜಾತಿ ಸ್ವರೂಪದಂತಹ ಅತಿರೇಕಕ್ಕೆ ಹೋಗಿದೆ. ಇದು ಈಗ ರಾಜ್ಯ ಕಾಂಗ್ರೆಸ್​ನ ಹಿರಿಯ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವುದರಿಂದ ಪ್ರತಿಪಕ್ಷಗಳಿಗೆ ತಾವೇ ಅಸ್ತ್ರ ಕಟ್ಟಂಗೆ ಆಗುತ್ತದೆ. ಹಿರಿಯ ನಾಯಕರೇ ಈ ರೀತಿ ಬಹಿರಂಗವಾಗಿ ಟೀಕೆಗಳನ್ನು ಮಾಡಿದರೆ ಪಕ್ಷಕ್ಕೆ ಹಾನಿಯಾಗುವುದು ನಿಶ್ಚಿತ. ಇದಕ್ಕೆ ಕಡಿವಾಣ ಹಾಕದಿದ್ದರೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗಲಿದೆ ಎಂದು ಕೆಲ ಹಿರಿಯ ನಾಯಕರು ಬೇಸರ ಹೊರಹಾಕಿರುವುದು ತಿಳಿದುಬಂದಿದೆ.

ಮೊನ್ನೆ ಡಿಸಿಎಂ ಜೊತೆ ನಡೆದ ಸಭೆಯಲ್ಲಿ ಹಿರಿಯ ನಾಯಕರು ಈ ಆತಂಕ ತೋಡಿಕೊಂಡಿದ್ದರು. ಜನವರಿ 16, ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ನಾಯಕರು ಇದೇ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕರ್ನಾಟಕ ಕಾಂಗ್ರೆಸ್​ನ ಉಸ್ತುವಾರಿಯಾಗಿರುವ ರಣದೀಪ್ ಸಿಂಗ್ ಸುರ್ಜೆವಾಲ ಅವರು ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಗೆ ಗಾಂಧಿ ಭೇಟಿಯ ಶತಮಾನೋತ್ಸವ ಹಿನ್ನೆಲೆಯಲ್ಲಿ ಜನವರಿ 21ರಂದು ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ನಡೆಯಲಿದ್ದು, ಅದರ ಸಿದ್ಧತೆ ವಿಚಾರವಾಗಿ ಸುರ್ಜೆವಾಲ ಚರ್ಚಿಸಲಿದ್ದಾರೆ. ಇಂದು ಭಾನುವಾರ ಸಂಜೆ 6ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು ಸರ್ಜೆವಾಲ ಕೂಡ ಇರಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್​ನೊಳಗಿನ ಭಿನ್ನಮತದ ವಿಚಾರ ಚರ್ಚೆಗೆ ಬರಬಹುದು. ಡಿಸಿಎಂ ಅನುಪಸ್ಥಿತಿಯಲ್ಲಿ ಕೆಲ ಶಾಸಕರು ಔತಣಕೂಟದಲ್ಲಿ ಪಾಲ್ಗೊಂಡ ವಿಚಾರವೂ ಪ್ರಸ್ತಾಪವಾಗಬಹುದು. ಈ ಭಿನ್ನಮತ ಶಮನ ಮಾಡುವ ಗುರುತರ ಹೊಣೆ ಸುರ್ಜೆವಾಲಗೆ ಇದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿ ಇದ್ದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಈ ಔತಣಕೂಟದಲ್ಲಿದ್ದರು. ಸಿದ್ದರಾಮಯ್ಯ ಅವರ ಟೀಮ್​ನವರು ಎನ್ನಲಾದ ಹಲವು ಶಾಸಕರು ಮತ್ತು ನಾಯಕರು ಈ ಡಿನ್ನರ್​ನಲ್ಲಿ ಪಾಲ್ಗೊಂಡಿದ್ದರು. ಡಿಕೆ ಶಿವಕುಮಾರ್ ಅವರ ವರ್ತನೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ಈ ಸಭೆಯಲ್ಲಿ ಅಸಮಾಧಾನ ಹೊರಬಂದಿತು ಎನ್ನಲಾಗಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು