LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

`ಸಿಎಂ ಮಾರ್ಗದಲ್ಲೇ ಖರ್ಗೆ ಕುಟುಂಬ'

ಬೆಂಗಳೂರು: ಮುಡಾ ಅಕ್ರಮದಲ್ಲಿ 14 ನಿವೇಶವನ್ನು ಸಿಎಂ ಸಿದ್ಧರಾಮಯ್ಯರ ಕುಟುಂಬ ವಾಪಸ್ ನೀಡಿತ್ತು. ಅದೇ ಮಾರ್ಗದಲ್ಲಿ ಈಗ ಖರ್ಗೆ ಕುಟುಂಬ ಸಹ ನಿವೇಶನ ವಾಪಸ್ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಬಿಜೆಪಿಯ ಡಾ.ಸಿ.ಎನ್. ಅಶ್ವತ್ಥ್‍ನಾರಾಯಣ್ ಹೇಳಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿರುವ ಅವರು, ಕೇವಲ ನಿವೇಶನ ವಾಪಸ್ ಮಾಡಿದ್ರೆ, ಕಾನೂನು ಕುಣಿಕೆಯಿಂದ ಪಾರಾಗಲು ಸಾಧ್ಯವಿಲ್ಲ. ನಾವು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವು. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೇ, ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಹಂಚಿಕೆಯಾಗಿದ್ದ ಜಮೀನು ಹಾಗೇ ಇರುತ್ತಿತ್ತು. ನಿಗಮದ ಮೇಲೆ ಒತ್ತಡ ಹಾಕಿ ಹಂಚಿಕೆ ಮಾಡಿಸಿಕೊಳ್ಳಲಾದ ಜಮೀನನ್ನು ವಾಪಸ್ ಕೊಟ್ಟಿದ್ದಾರೆ.

ಕಾಂಗ್ರೆಸ್‍ನಲ್ಲಿ ತಪ್ಪು ಮಾಡುವುದು. ಅದು ಬೆಳಕಿಗೆ ಬಂದಾಗ ಹೀಗೆ ಸರಿಪಡಿಸಿಕೊಂಡಿದ್ದೇವೆ ಎಂಬುದನ್ನು ಬಿಂಬಿಸುವುದು. ನಾವು ಸದನದ ಒಳಗೂ, ಹೊರಗೂ ಇದರ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.ಕೆಐಎಡಿಬಿ ನಿಗಮದಿಂದ ಹಂಚಿಕೆಯಾಗಿ ವಾಪಸ್ ಕೊಟ್ಟಿರುವುದಕ್ಕೆ ಸುಮ್ಮನಾಗಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು