LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Tumakuru

ಸಿಎಂ ಸಿದ್ದರಾಮಯ್ಯರಿಂದ ಗಂಗಾ ಆಸ್ಪತ್ರೆ ಲೋಕಾರ್ಪಣೆ ಚಿಕಿತ್ಸಾ ಸೌಲಭ್ಯ ಹೆಚ್ಚು ಜನರಿಗೆ ದೊರೆಯಲೆಂದು ಸಿಎಂ ಆಶಯ

ತುಮಕೂರು: ಅಂತರರಾಷ್ಟ್ರೀಯ ದರ್ಜೆಯ ಚಿಕಿತ್ಸಾಸೌಲಭ್ಯ ಹೊಂದಿರುವ ನಗರದ ಶಿರಾ ರಸ್ತೆಯಲ್ಲಿರುವ ಗಂಗಾ ಆಸ್ಪತ್ರೆಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಹೆಸರಾಂತ ತಜ್ಞವೈದ್ಯರಾದ ಡಾ.ವಿಜಯ್ ತುಪಾಕಿ ಅವರು ಅತ್ಯಾಧುನಿಕ ಸೌಲಭ್ಯದ ಗಂಗಾ ಆಸ್ಪತ್ರೆ ಆರಂಭಿಸಿದ್ದಾರೆ. ಈ ಆಸ್ಪತ್ರೆ ಹೆಚ್ಚು ಜನರ ಚಿಕಿತ್ಸೆಗೆ ಅನುಕೂಲವಾಗಲಿ ಎಂದು ಆಶಿಸಿದರು.

ಬೆನ್ನು ಮೂಳೆ, ಬೆನ್ನು ನರ ಮತ್ತು ಎಲುಬು ಕೀಲು ತಜ್ಞರಾಗಿರುವ ಡಾ.ವಿಜಯ್ ತುಪಾಕಿ ಅವರುಪೈನಲ್ ಕಾರ್ಡ್ ಚಿಕಿತ್ಸೆಯಲ್ಲಿ ಪರಿಣಿತರು. ಆರೋಗ್ಯ
ಸಮಸ್ಯೆ ಇರುವವರಿಗೆ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸಾ ಸೇವೆ ದೊರೆಯಲಿ ಎಂದು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರಿದರು.
ಬೆನ್ನು ಮೂಳೆ, ಬೆನ್ನು ನರ, ಕೀಲು ಸಮಸ್ಯೆಯ ಕ್ಲಿಷ್ಟಕರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಪರಿಣತರಾಗಿ ಡಾ.ವಿಜಯ್ ತುಪಾಕಿಯವರು 20ಕ್ಕೂ ಹೆಚ್ಚು ದೇಶಗಳ ರೋಗಿಗಳಿಗೆ ಚಿಕಿತ್ಸೆ ನೀಡಿ ಅಂತರರಾಷ್ಟ್ರೀಯ ಮಟ್ಟದಲ್ಲೂ ಹೆಸರಾಗಿದ್ದಾರೆ.

ತುಮಕೂರಿನ ಕೆಲವೇ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳಲ್ಲಿ ಗಂಗಾ ಆಸ್ಪತ್ರೆ ಮುಂಚೂಣಿಯಲ್ಲಿದ್ದು 55 ವೈದ್ಯಕೀಯ ಸಮಾಲೋಚಕರು, 12 ಐಸಿಯು ಬೆಡ್‍ಗಳು, 4 ಆಪರೇಷನ್ ಥಿಯೇಟರ್, ವಿವಿಧ ದರ್ಜೆಯ ವಾರ್ಡ್‍ಗಳು, ಪರಿಣಿತ ಸಿಬ್ಬಂದಿ, ಪ್ರಯೋಗಾಲಯ, ಆಧುನಿಕ ಚಿಕಿತ್ಸಾ ಯಂತ್ರೋಪಕರಣ ಮತ್ತಿತರ ಅಗತ್ಯ ಎಲ್ಲಾ ಸೌಕರ್ಯಗಳು ಈ ಆಸ್ಪತ್ರೆಯಲ್ಲಿವೆ.

ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಭೈರತಿ ಸುರೇಶ್, ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ, ಕೂಡ್ಲಿಗಿ ಶಾಸಕ ಡಾ.ಶ್ರೀನಿವಾಸ್, ಮುಖ್ಯಮಂತ್ರಿಗಳ ಮಾಧ್ಯಮಸಲಸಹೆಗಾರ ಪ್ರಭಾಕರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಪಂ ಸಿಇಓ ಜಿ.ಪ್ರಭು, ಎಸ್ಪಿ ಕೆ.ವಿ. ಅಶೋಕ್, ನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ,ಹಿರಿಯ ಐಎಎಸ್ ಅಧಿಕಾರಿ ಅಶೋಕ್ ದಳವಾಯಿ,ಹಡಗಿನಾಳ ಮಠದ ಮುತ್ತೇಶ್ವರ ಸ್ವಾಮೀಜಿ, ಪ್ರಜಾಪಗ್ರತಿ ಸಂಪಾದಕರಾದ ಎಸ್.ನಾಗಣ್ಣ, ಹಾಲಸಿದ್ದೇಶ್ವರ ದೇವಸ್ಥಾನ ಅರ್ಚಕರಾದ ಭರಮಪ್ಪ ಪೂಜಾರ್, ನಾಗಪ್ಪ ಸನದಿ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು, ಅಧಿಕಾರಿಗಳು, ಸಂಘಸಂಸ್ಥೆಗಳು ಮುಖಂಡರು ಆಗಮಿಸಿ ಶುಭ ಕೋರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು