LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸಿಕ್ಸರ್‌ಗಳ ಸುರಿಮಳೆಯೊಂದಿಗೆ ಟೀಮ್ ಇಂಡಿಯಾ ವಿಶ್ವ ದಾಖಲೆ

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ೨೦ ಪಂದ್ಯದಲ್ಲಿ ತಿಲಕ್ ವರ್ಮಾ ಒಟ್ಟು ೭ ಸಿಕ್ಸ್ಗಳನ್ನು ಬಾರಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳಿಂದ ಮೂಡಿಬಂದ ಒಟ್ಟು ಸಿಕ್ಸ್ಗಳ ಸಂಖ್ಯೆ ೧೩. ಇದರೊಂದಿಗೆ ಟಿ೨೦ ಕ್ರಿಕೆಟ್‌ನ ವಿಶ್ವ ದಾಖಲೆಯೊಂದು ಭಾರತ ತಂಡದ ಪಾಲಾಗಿದೆ.
ಸೌತ್ ಆಫ್ರಿಕಾ ವಿರುದ್ಧದ ಟಿ೨೦ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳ ಅಬ್ಬರ ಮುಂದುವರೆದಿದೆ. ಮೊದಲೆರಡು ಪಂದ್ಯಗಳಲ್ಲಿ ಒಟ್ಟು ೧೬ ಸಿಕ್ಸ್ ಬಾರಿಸಿದ್ದ ಭಾರತೀಯ ಬ್ಯಾಟರ್‌ಗಳು ಇದೀಗ ಮೂರನೇ ಟಿ೨೦ ಪಂದ್ಯದಲ್ಲಿ ೧೩ ಸಿಕ್ಸ್ ಸಿಡಿಸಿದ್ದಾರೆ. ಈ ಸಿಕ್ಸ್ಗಳೊಂದಿಗೆ ೨೦೨೪ ರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು. ೨೦೨೪ರಲ್ಲಿ ೨೧ ಟಿ೨೦ ಪಂದ್ಯಗಳನ್ನಾಡಿರುವ ವಿಂಡೀಸ್ ಬ್ಯಾಟರ್‌ಗಳು ಒಟ್ಟು ೨೦೧ ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಭಾರತೀಯ ಬ್ಯಾಟ್ಸ್ಮನ್‌ಗಳು ಯಶಸ್ವಿಯಾಗಿದ್ದಾರೆ.
೨೦೨೪ ರಲ್ಲಿ ಭಾರತ ತಂಡವು ಈವರೆಗೆ ೨೫ ಟಿ೨೦ ಪಂದ್ಯಗಳನ್ನಾಡಿದೆ. ಈ ವೇಳೆ ಒಟ್ಟು ೨೧೪ ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ವಿಶೇಷ ಎಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಹೊರತುಪಡಿಸಿ ಈ ವರ್ಷ ಬೇರೆ ಯಾವುದೇ ತಂಡ ಟಿ೨೦ ಕ್ರಿಕೆಟ್‌ನಲ್ಲಿ ೨೦೦+ ಸಿಕ್ಸ್ ಸಿಡಿಸಿಲ್ಲ. ಇದೀಗ ಇನ್ನೂರು ಸಿಕ್ಸ್?ಗಳ ಸಾಧನೆಯೊಂದಿಗೆ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿದ್ದು, ೨೦೨೪ರ ಅಂತ್ಯದವರೆಗೆ ಈ ವರ್ಲ್್ಡ ರೆಕಾರ್ಡ್ ಅನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ. ಇನ್ನು ಸೌತ್ ಆಫ್ರಿಕಾ ವಿರುದ್ಧದ ೩ನೇ ಟಿ೨೦ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ತಿಲಕ್ ವರ್ಮಾ ೫೬ ಎಸೆತಗಳಲ್ಲಿ ೭ ಸಿಕ್ಸ್ ಹಾಗೂ ೮ ಫೋರ್‌ಗಳೊಂದಿಗೆ ಅಜೇಯ ೧೦೭ ರನ್ ಬಾರಿಸಿದರು. ಈ ಶತಕದ ನೆರವಿನಿಂದ ಟೀಮ್ ಇಂಡಿಯಾ ೨೦ ಓವರ್‌ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೨೧೯ ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ೨೦ ಓವರ್‌ಗಳಲ್ಲಿ ೨೦೭ ರನ್‌ಗಳಿಸಿ ೧೧ ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು