LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸಿಟಿ ರವಿ ಅವರ ಚಿಕ್ಕಮಗಳೂರು ನಗರದ ಬಸವನಹಳ್ಳಿ ನಿವಾಸಕ್ಕೆ ಅನಾಮಧೇಯ ಪತ್ರ ರವಾನೆ

ಚಿಕ್ಕಮಗಳೂರು: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ MLC ಸಿ.ಟಿ ರವಿ ಬಳಸಿದ್ದಾರೆ ಎನ್ನಲಾದ ಆ ಒಂದು ಪದ ರಾಜಕೀಯ ವಾಗ್ವಾದದ ಜೊತೆಗೆ ಬೆದರಿಕೆ ಪತ್ರದವರೆಗೂ ಬಂದಿದೆ. ಕಳೆದ ತಿಂಗಳು ಬೆಳಗಾವಿಯಲ್ಲಿ ನಡೆದ ಸದನದಲ್ಲಿ ಸಿ.ಟಿ ರವಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆ ಪದ ಬಳಕೆ ಮಾಡಿದ್ರು ಎಂಬ ಆರೋಪ ಕೇಳಿ ಬಂದು ಕೇಸ್ ದಾಖಲಾಗಿ ಸಿ.ಟಿ‌ ರವಿ ಬಂಧನ ಕೂಡವಾಗಿ ರಾಜಕೀಯ ವಾಗ್ವಾದಕ್ಕೂ ಕಾರಣವಾಗಿತ್ತು.ಇದೀಗ ವಿಚಾರ ತಣ್ಣಗಾಯ್ತು ಅನ್ನುವಷ್ಟರಲ್ಲಿ ಸಿ.ಟಿ ರವಿ ಅವರ ಚಿಕ್ಕಮಗಳೂರು ನಗರದ ಬಸವನಹಳ್ಳಿ ನಿವಾಸಕ್ಕೆ ಅನಾಮಧೇಯ ಪತ್ರ ಬಂದಿದೆ. ಪತ್ರದಲ್ಲಿ ಹೆಬ್ಬಾಳ್ಕರ್ ಗೆ 15 ದಿನದೊಳಗೆ ಕಾಲು‌ಹಿಡಿದು ಕ್ಷಮೆ ಕೇಳ್ಬೇಕು. ಇಲ್ಲ ಮಗ ಸೂರ್ಯ ಸೇರಿದಂತೆ ರವಿಯನ್ನ ಹತ್ಯೆ ಮಾಡುವುದಾಗಿ ಪತ್ರ ಬಂದಿದ್ದು, ಈ ಬಗ್ಗೆ ಸಿ.ಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಚಿಕ್ಕಮಗಳೂರಿನ ವಿಜಯಪುರದ ಅಂಚೆ ಕಚೇರಿಯಿಂದ ಪತ್ರ ರವಾನೆಯಾಗಿರುವುದು ಬೆಳಕಿಗೆ ಬಂದಿದೆ.

ಜನವರಿ 9ರಂದು ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಬೆದರಿಕೆ ಪತ್ರ ಬಂದಿದ್ದು, ಅದು ಸಿಟಿ ರವಿ ಅವರ ತವರು ಕ್ಷೇತ್ರ ಚಿಕ್ಕಮಗಳೂರಿನ ವಿಜಯಪುರದ ಅಂಚೆ ಕಚೇರಿಯಿಂದ ಬಂದಿರುವುದು ಕಂಡುಬಂದಿದೆ. ಹೀಗಾಗಿ ಪೊಲೀಸರು, ಪತ್ರ ಕಳುಹಿಸಿದ ವ್ಯಕ್ತಿ ಯಾರು ಎನ್ನುವುದನ್ನು ಪತ್ತೆ ಮಾಡಲು ಪೋಸ್ಟ್ ಆಫೀಸ್ ಸುತ್ತಮುತ್ತಲಿನ ಸಿಸಿಕ್ಯಾಮರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಸಿ ಟಿ ರವಿಗೆ ಬೆದರಿಕೆ ಪತ್ರ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೇವೆ. ಯಾರೇ ಪತ್ರ ಬರೆದಿದ್ದರೂ‌ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಸರ್ಕಾರದ ವಿರುದ್ಧ ಮುಗಿ ಬೀಳಲು ಹಾಗೂ  ಇನ್ನಷ್ಟು ಸಿಂಪತಿ ಗಿಟ್ಟಿಸಿಕೊಳ್ಳಲು ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರ ಹೆಸರಿನಲ್ಲೇ ಬಿಜೆಪಿ ಕಾರ್ಯಕರ್ತನೇ ಈ ರೀತಿ ಪತ್ರ ಬರೆದಿರಬಹುದು ಎಂಬ ಅನುಮಾನಗಳು ಸಹ ವ್ಯಕ್ತವಾಗುತ್ತಿವೆ. ಇದರ ಮಧ್ಯ ಇದೀಗ ಚಿಕ್ಕಮಗಳೂರಿನ ಅಂಚೆ ಕಚೇರಿಯಿಂದಲೇ ಪತ್ರ ಪೋಸ್ಟ್ ಆಗಿರುವುದು ಬಾರೀ ಸಂಚಲನಕ್ಕೆ ಕಾರಣವಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.

ಸಿಟಿ ರವಿ ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಳಸಿದ್ರೂ ಎನ್ನಲಾದ ಆ ಒಂದು ಪದ ರಾಜಕೀಯವಾಗಿ ಕಿತ್ತಾಟಕ್ಕೂ ಕಾರಣವಾಗಿ ಕೊನೆಗೆ ಬೆದರಿಕೆ ಪತ್ರದ ವರೆಗೂ ಬಂದು ನಿಂತಿದ್ದು, ಮುಂದೆ ಇದು ಇನ್ಯಾವ ಹಂತಕ್ಕೆ ತಲುಪುತ್ತೋ ಕಾದುನೋಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು