LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಡಿ ಬಂದ್ ಮುಡಾ ಶುರು! ಸಿಎಂ ಕುರ್ಚಿಗಾಗಿ ಮುಡಾ ಹಗರಣ ಬಯಲಿಗೆ ಡಿಸಿಎಂ ಡಿಕೆಶಿ ಮೇಲೆ ಕೇಂದ್ರ ಸಚಿವ ಎಚ್‍ಡಿಕೆ ಪರೋಕ್ಷ ಆರೋಪ

ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿದ ಅವರು, ಸಿಡಿ ಫ್ಯಾಕ್ಟರಿ ಈಗ ಬಂದ್ ಆಗಿದೆ. ಮುಡಾ ಫ್ಯಾಕ್ಟರಿ ಶುರುವಾಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದ್ದಾರೆ.

ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ ಎಂದು ಅವರು ಟೀಕಿಸಿದ್ದಾರೆ.ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‍ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ.

62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ತಮ್ಮ ಪಕ್ಷದ ಅಭಿಮಾನಿ ಕಾರ್ಯಕರ್ತನೋರ್ವ ತಮ್ಮ ಗೆಲುವಿಗಾಗಿ ದೇವಿರಿಗೆ ಕಟ್ಟಿದ್ದ ಹರಕೆಯ ಗೆಲುವಿನ ಗಂಟನ್ನು ಬಿಚ್ಚುವ ಮೂಲಕ ಕಾರ್ಯಕರ್ತನ ಹರಕೆಯನ್ನು ಅವರು ತೀರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು