LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಹಣದ ದುರುಪಯೋಗ ಅವ್ಯಾಹತವಾಗಿ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹೇಳಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ.

ಇದನ್ನ ಮುಚ್ಚಿಹಾಕಲು ಸಿಎಂ ಹಾಗೂ ಡಿಸಿಎಂ ರಾಜಕೀಯ ನಾಟಕ ಆಡುತ್ತಿದ್ದಾರೆ. ಮೈಸೂರು ಮುಡಾದಲ್ಲಿ ಬೇಲಿಯೇ ಎದ್ದು ಹೊಲ ಮೇದಾಂತಾಗಿದೆ. ಸಾವಿರಾರು ಕೋಟಿ ಬೆಲೆ ಬಾಳುವ ಮುಡಾ ಆಸ್ತಿ ಕಳ್ಳರ ಪಾಲಾಗಿದೆ. 69ನೇ ಇಸವಿಯಲ್ಲಿ ಭೂಮಿ ಕಳೆದುಕೊಂಡವರು ಇವತ್ತಿಗೆ ಜ್ಞಾನೋದಯವಾಗಿ ಅರ್ಜಿ ಕೊಟ್ಟಿದ್ದಾರಂತೆ. ಮುಡಾದವರು ಲಕ್ಷ ಲಕ್ಷ ಅಡಿಯನ್ನ ಬಿಟ್ಟು ಕೊಟ್ಟಿದ್ದಾರೆ. ಮುಡಾ ಲೋಟಿಯನ್ನ ನೋಡಿದರೇ ಚಾಲ್ಸ್ ಶೋಬರಾಜ್‍ನದ್ದೂ ಏನು ಹಗರಣ ಇಲ್ಲ ಅಂದುಕೊಳ್ಳುತ್ತಾರೆ ಎಂದು ಅಚ್ಚರಿ ಬಾಂಬ್ ಸಿಡಿಸಿದ್ದಾರೆ.

ಮುಡಾ ಹಗರಣದ ಬಗ್ಗೆ ಬಿಜೆಪಿ ಸಮಗ್ರ ಮಾಹಿತಿ ಕಲೆ ಹಾಕುತ್ತಿದೆ. ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸಮಗ್ರ ತನಿಖೆಯಾಗಬೇಕು. ಯಾರೇ ಈ ಪ್ರಕರಣದಲ್ಲಿದ್ದರೂ ಅವರ ತಲೆ ತಂಡ ಆಗಬೇಕು. ಬಡವರಿಗೆ, ದಲಿತರಿಗೆ ಜಾಗ ಕೊಡಲು ಆಗುವುದಿಲ್ಲ, ಲೋಟಿಕೋರರಿಗೆ ಜಾಗ ಕೊಡುತ್ತಿದ್ದಾರೆ. ಈ ಸರ್ಕಾರ ಬಂದ ಮೇಲೆ ಎಲ್ಲಾ ದರಗಳು ಹೆಚ್ಚಾಗಿದೆ ಎಂದು ಕಿಡಿ ಕಾರಿದ್ದಾರೆ.

ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಗಿದೆ? ಬೇರೆ ರಾಜ್ಯದ ಚುನಾವಣೆಗೆ ಎಷ್ಟು ಹಣ ಕೊಟ್ಟಿದ್ದಾರೆ. ಇವೆಲ್ಲವೂ ಸಮಗ್ರವಾಗಿ ಬಹಿರಂಗ ಆಗಬೇಕು. ಸಿಎಂ ಅವರ ಅಣತಿ ಇಲ್ಲದೇ ಹುಲ್ಲುಕಡ್ಡಿಯೂ ಅಲ್ಲಾಡುವುದಿಲ್ಲ. ಸಿಎಂ ಏನ್ ಹೆಬೆಟ್ಟಾ? ಫೈನಾನ್ಸ್ ಮಿನಿಸ್ಟರ್ ಅನಪಡ್ ಹಾ? ಸಿದ್ದರಾಮಯ್ಯ ಅತ್ಯಂತ ಮೇಧಾವಿ, ಅತಿ ಹೆಚ್ಚುಬಾರಿ ಬಜೆಟ್ ಮಂಡಿಸಿದ ಖ್ಯಾತಿ ಅವರಿಗಿದೆ. ಆ ಖ್ಯಾತಿ ಇರುವ ಇಲಾಖೆಯಿಂದಲೇ ಸಾಲು ಸಾಲು ಹಗರಣ ನಡೆದಿದೆ. ಮೈಸೂರು ಮುಡಾದಲ್ಲಿ ಸಿಎಂ ಕೃಪಾಕಟಾಕ್ಷ ಇಲ್ಲದೇ ಹಗರಣ ನಡೆಯಲು ಸಾಧ್ಯವೇ? ಒಂದು ವೇಳೆ ಸಾಧ್ಯ ಇದ್ರೆ ಸಿದ್ದರಾಮಯ್ಯ ದುರ್ಬಲ ಸಿಎಂ, ಗೊತ್ತಿದ್ದೂ ಮಾಡದೇ ಮಾಡಿದ್ದರೆ ಭ್ರಷ್ಟಾಚಾರಿ ಸಿಎಂ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯ ಸರ್ಕಾರ ನಂಬರನಲ್ಲಿ ಸೇಫ್ ಇದ್ದಾರೆ. ಆದರೆ ಜನರ ನಂಬಿಕೆಯನ್ನ ಕಳೆದುಕೊಂಡಿದೆ. ವಿಶ್ವಾಸ ಇಲ್ಲದ ಸಂಬಂಧ ಎಷ್ಟು ದಿನ ಉಳಿಯಲು ಸಾಧ್ಯ? ತಾಂತ್ರಿಕವಾಗಿ ಸರ್ಕಾರ ಸೇಫ್ ಆಗಿದೆ, ಆತ್ಮವಿಶ್ವಾಸದಲ್ಲಿ ಸರ್ಕಾರ ವೀಕ್ ಆಗಿದೆ ಸಿ.ಟಿ ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು