LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ; ವಿದ್ಯಾರ್ಥಿಗಳಿಂದ ಬೃಹತ್ ಪಂಜಿನ ಮೆರವಣಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಅನಂತ್ ನಾಯ್ಕ,ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಮಾತನಾಡಿ,ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಬೆಂಗಳೂರಿನ ಮೌರ್ಯ ವೃತ್ತದಿಂದ ರಾಜಭವನದವರೆಗೆ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ,ಆಗಸ್ಟ್ 27ರಂದು ರಾಜಭವನ ಮುತ್ತಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಈ ಪಿತ್ತೂರಿಯ ವಿರುದ್ಧ ರಾಜ್ಯವ್ಯಾಪಿ ಹೋರಾಟವನ್ನು ಮತಷ್ಟು ತೀವ್ರಗೊಳಿಸಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ನಿರ್ಧರಿಸಿದೆ,ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಜತೆಗೂಡಿ ಹೋರಾಟ ನಡೆಸಲಾಗುವುದು,ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ, ರಾಜ್ಯ ಬಿಜೆಪಿಯ ಕೈ ಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ,

ರಾಜಭವನ ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯ ಅವರನ್ನು ಹತ್ತಿಕ್ಕುವ ಕೆಲಸ ನಡೆದಿದೆ,ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾಗಿ ಕಾರ್ಯನಿರ್ವಹಿಸಬೇಕಿದ್ದ ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟರಂತೆ ವರ್ತಿಸುತ್ತಾ ಪ್ರಜಾ ಪ್ರಭುತ್ವ ಕಗ್ಗೊಲೆ ಮಾಡುತ್ತಿದ್ದಾರೆ ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳ ಪರವಾಗಿ ಅನೇಕ ಯೋಜನೆಗಳನ್ನು ಜಾರಿ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹತ್ತಿಕ್ಕುವ ಪ್ರಯತ್ನದ ವಿರುದ್ದ ರಾಜ್ಯದ ಎಲ್ಲ ಕಾಲೇಜು, ವಿಶ್ವವಿದ್ಯಾಲಯ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.ಸ್ನಾತಕೋತ್ತರ ಮತ್ತು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಪ್ರಧಾನ ಕಾರ್ಯದರ್ಶಿ ಮೆಡಲ್ ಮುನಿ ಚಂದ್ರು, ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶ್ರೀನಾಥ್ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು